ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ಭೈರವೇಶ್ವರನಗರದ ಶೆಟ್ಟಿಹಳ್ಳಿಯಲ್ಲಿರುವ ತಮ್ಮ ಮನೆಯ
ಬಾಗಿಲಿನ ಡೋರ್ ಲಾಕ್ ಮುರಿದು, ಚಿನ್ನಾಭರಣ ಮತ್ತು ನಗದು ಹಣವನ್ನು ಯಾರೋ ಕಳ್ಳರು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆಂದು ಪಿರ್ಯಾದುದಾರರು ನೀಡಿದ ದೂರಿನ ಮೇರೆಗೆ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಹಗಲು & ರಾತ್ರಿ ಕನ್ನಾ ಕಳವು ಪ್ರಕರಣ ದಾಖಲಾಗಿರುತ್ತದೆ.
ಈ ಪ್ರಕರಣದ ಪತ್ತೆ ಕಾರ್ಯಕೈಗೊಂಡ ಪೊಲೀಸರು 3 ಜನ ಆರೋಪಿಗಳನ್ನು ದಸ್ತಗಿರಿ ಮಾಡಿ,
ಅವರುಗಳು ನೀಡಿದ ಮಾಹಿತಿ ಮೇರೆಗೆ ಸುಮಾರು 6.45 ಲಕ್ಷ ರೂ. ಮೌಲ್ಯದ 129 ಗ್ರಾಂ ತೂಕದ
ಚಿನ್ನಾಭರಣ, 108 ಲಕ್ಷ ರೂ. ನಗದು ಹಣ ಹಾಗೂ ಕೃತ್ಯಕ್ಕೆ ಬಳಸಿದ 2 ದ್ವಿಚಕ್ರ ವಾಹನವನ್ನು
ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.
ಈ ಪ್ರಕರಣದ ತನಿಖೆಯಿಂದ ಒಬ್ಬ ಆರೋಪಿಯು ಹಳೆಯ ಎಂ.ಓ ಆಸಾಮಿಯಾಗಿದ್ದು, ಈತನ ವಿರುದ್ಧ ರಾಮಮೂರ್ತಿನಗರ, ಬೈಯ್ಯಪ್ಪನಹಳ್ಳಿ, ಯಶವಂತಪುರ, ಮಹಾಲಕ್ಷ್ಮಿಲೇಔಟ್ ಪೊಲೀಸ್ ಠಾಣೆಗಳಲ್ಲಿ ದ್ವಿಚಕ ವಾಹನ, ಮತ್ತು ಕನ್ನಾ ಕಳವು ಪ್ರಕರಣಗಳಲ್ಲಿ ಭಾಗಿಯಾಗಿ ಜೈಲಿಗೆ ಹೋಗಿ ಬಂದಿರುತ್ತಾನೆ. ಮತ್ತೊಬ್ಬ ಆರೋಪಿಯು ಬನಶಂಕರಿ ಪೊಲೀಸ್ ಠಾಣೆಯ ಮೊಬೈಲ್ ಕಳವು ಪ್ರಕರಣದಲ್ಲಿ ಜೈಲಿಗೆ ಹೋಗಿ ಬಂದಿರುವುದಾಗಿ ತಿಳಿದು ಬಂದಿರುತ್ತದೆ.
ಈ ಪ್ರಕರಣದ ಪತ್ತೆ ಕಾರ್ಯವನ್ನು ಉತ್ತರ ವಿಭಾಗ ಉಪ ಪೊಲೀಸ್ ಆಯುಕ್ತರಾದ ಶ್ರೀ. ಶಿವ ಪ್ರಕಾಶ್ ದೇವರಾಜು ರವರ ಮಾರ್ಗದರ್ಶನದಲ್ಲಿ ಶ್ರೀ, ಸದಾನಂದ ಎ ತಿಪ್ಪಣ್ಣವರ್, ಸಹಾಯಕ ಪೊಲೀಸ್ ಆಯುಕ್ತರು ಪೀಣ್ಯ ಉಪ ವಿಭಾಗ ರವರ ನೇತೃತ್ವದಲ್ಲಿ, ಬಾಗಲಗುಂಟೆ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಶ್ರೀ. ಹನುಮಂತರಾಜು.ಎಂ ಮತ್ತು ಸಿಬ್ಬಂದಿಯವರುಗಳು ಆರೋಪಿಗಳನ್ನು ದಸ್ತಗಿರಿ ಮಾಡಿ, ಚಿನ್ನಾಭರಣ ಮತ್ತು ನಗದು ಹಣವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.
ಈ ಉತ್ತಮ ಕಾರ್ಯವನ್ನು ಬೆಂಗಳೂರು ನಗರದ ಹಿರಿಯ ಪೊಲೀಸ್ ಅಧಿಕಾರಿಗಳು ಶ್ಲಾಘಿಸಿರುತ್ತಾರೆ.