ಸುಧಾ (Detective Dog)ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ನಡೆದ ಹಲವು ಪ್ರಮುಖ ಪ್ರಕರಣಗಳನ್ನು ಪತ್ತೆ ಹಚ್ಚುವಲ್ಲಿ ಎತ್ತಿದ ಕೈಯಾಗಿದ್ದಳು. ಕೊಲೆ, ಸುಲಿಗೆ, ಕಳ್ಳತನ ಹೀಗೆ ಸಾವಿರಾರು ಪ್ರಕರಣಗಳನ್ನು ಭೇದಿಸುವಲ್ಲಿ ಈಕೆಯ ಪಾತ್ರ ಪ್ರಮುಖವಾಗಿತ್ತು.ಮಂಗಳೂರು ಪೊಲೀಸ್ ಕಮಿಷನರ್ ಸೇರಿದಂತೆ ಹಲವು ಉನ್ನತ ಶ್ರೇಣಿಯ ಅಧಿಕಾರಿಗಳು ಈ ಅಂತಿಮ ನಮನ ಕಾರ್ಯದಲ್ಲಿ ಭಾಗಿಯಾಗುವ ಮೂಲಕ ಶ್ವಾನಕ್ಕೆ ವಿದಾಯ ಹೇಳಿದ್ದಾರೆ.

ಕಳೆದ ಹತ್ತು ವರ್ಷಗಳಿಂದ ಮಂಗಳೂರು ಅಪರಾಧ ಜಗತ್ತಿನ ಕ್ಲಿಷ್ಟಕರ ಪ್ರಕರಣಗಳನ್ನು ಬಯಲಿಗೆಳೆದಿದ್ದ ಶ್ವಾನ \’ಸುಧಾ\’ ಅನಾರೋಗ್ಯದಿಂದ ಮೃತಪಟ್ಟಿದೆ. ಸುಧಾಗೆ ಸಕಲ ಸರಕಾರಿ ಗೌರವಗಳೊಂದಿಗೆ ಮಂಗಳೂರಿನಲ್ಲಿ ಅಂತ್ಯಕ್ರಿಯೆ ನಡೆಸಲಾಗಿದೆ.

ಸುಧಾ ಅಂತ್ಯಕ್ರಿಯೆಯ ವೇಳೆಯಲ್ಲಿ ಶ್ವಾನದಳದ ಸಿಬ್ಬಂದಿಗಳು ತನ್ನ ಅಚ್ಚುಮೆಚ್ಚಿನ ಶ್ವಾನದ ಅಗಲುವಿಕೆಗೆ ಕಣ್ಣೀರಿನ ವಿದಾಯ ಹೇಳಿದ್ದಾರೆ. ಸುಧಾಗೆ ಕಳೆದ ಮೂರು ತಿಂಗಳಿನಿಂದ ಶ್ವಾಸಕೋಶದಲ್ಲಿ ಗಡ್ಡೆಯಂತಹ ವಸ್ತು ಪತ್ತೆಯಾಗಿತ್ತು. ಆ ಬಳಿಕ ನಿರಂತರವಾಗಿ ವೈದ್ಯರಿಂದ ಚಿಕಿತ್ಸೆ ಕೊಡಿಸಲಾಗಿತ್ತಾದರೂ, ಕಳೆದ ಎರಡು ದಿನಗಳಿಂದ ಯಾವುದೇ ಆಹಾರ ಸೇವಿಸದೆ ಸುಧಾ ಸಂಪೂರ್ಣ ಬಡವಾಗಿತ್ತು.
ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,
