ಹೊಯ್ಸಳ ವಾಹನದ ಸಿಬ್ಬಂದಿ ಮತ್ತು ಅಧಿಕಾರಿಗಳು ಹುಬ್ಬಳ್ಳಿ ಧಾರವಾಡ ವ್ಯಾಪ್ತಿಯ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ, ಶಿಕ್ಷಕ ಮತ್ತು ಸಿಬ್ಬಂದಿಗಳಿಗೆ 112 ERSS ವ್ಯವಸ್ಥೆ ಬಗ್ಗೆ ಮಾಹಿತಿ ನೀಡಿ ತುರ್ತು ಸಂದರ್ಭಗಳಲ್ಲಿ ಮತ್ತು ಯಾವುದೇ ಸಹಾಯಕ್ಕಾಗಿ 112 ಸಂಖ್ಯೆಗೆ ಕರೆ ಮಾಡುವಂತೆ ಜಾಗೃತಿ ಮೂಡಿಸಿದರು. 112 Hubballi Dharwad
ಇಲ್ಲಿಯವರೆಗೆ ಬಳಕೆಯಲ್ಲಿದ್ದ ಪ್ರತ್ಯೇಕ ತುರ್ತು ದೂರವಾಣಿ ಸಂಖ್ಯೆಗಳಾದ 100, 101 ಮುಂತಾದವುಗಳ ಬದಲಾಗಿ ಇನ್ನು ಮುಂದೆ ಸಾರ್ವಜನಿಕರು 112ಗೆ ಕರೆ ಮಾಡುವ ಮೂಲಕ ಶೀಘ್ರವಾಗಿ ಪೊಲೀಸ್, ಅಗ್ನಿಶಾಮಕದಳ, ವಿಪತ್ತು ಇತ್ಯಾದಿ ತುರ್ತು ಸೇವೆಗಳ ನೆರವು ಪಡೆಯಬಹುದಾಗಿರುತ್ತದೆ ಎಂದರು.