ದಿನಾಂಕ:21/03/2024 ರಂದು ಈಶಾನ್ಯ ವಿಭಾಗದ ಮಹಿಳಾ ಪೊಲೀಸ್ ಠಾಣೆಯ ಪಿ.ಎಸ್.ಐ ರವರು ಅಮೃತಹಳ್ಳಿ ಪೊಲೀಸ್ ಠಾಣಾ ಸರಹದ್ದಿನ ಕಡೆ ಗಸ್ತಿನಲ್ಲಿರುವಾಗ್ಗೆ, ಬಾತ್ಮಿದಾರರಿಂದ ಮಾಹಿತಿಯೊಂದು ದೊರೆತಿರುತ್ತದೆ. ಆ ಮಾಹಿತಿಯಲ್ಲಿ ಯಾರೋ ಅಪರಿಚಿತ ವ್ಯಕ್ತಿಗಳು ಮೊಬೈಲ್ ವೆಬ್‌ಸೈಟ್‌ಗಳನ್ನು ಬಳಸಿಕೊಂಡು, ಸಾರ್ವಜನಿಕವಾಗಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಾ ಅಕ್ರಮ ಹಣ ಸಂಪಾದನೆ ಮಾಡುತ್ತಿರುವುದಾಗಿ ವಿಳಾಸದ ಬಗ್ಗೆ ಮಾಹಿತಿ ಸಂಗ್ರಹಿಸಿ ದಾಳಿ ಮಾಡಿ ಅಲ್ಲಿ ವೇಶ್ಯಾವಾಟಿಕೆಗೆ
ಖಚಿತಪಡಿಸಿಕೊಂಡು,ಸಂಬಂಧಿಸಿದಂತೆ ದೂರೆಯುವ ವಸ್ತುಗಳನ್ನು ವಶಪಡಿಸಿಕೊಂಡು, ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮೂರು ವ್ಯಕ್ತಿಗಳನ್ನು ವಶಕ್ಕೆ ಪಡೆದು, ಅವರುಗಳಿಂದ ವಿವಿಧ ಕಂಪನಿಯ 13 ಮೊಬೈಲ್ ಫೋನ್‌ಗಳು, 1 ಅಕ್ಟಿವಾ ಸ್ಕೂಟರ್, 1 ಟೊಯೋಟಾ ಇಟಿಯಾಸ್ ಕಾರು ಮತ್ತು 30,000/- ನಗದು ಹಣ ವಶಕ್ಕೆ ಪಡೆಯಲಾಗಿದೆ.
ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಈಶಾನ್ಯ ವಿಭಾಗದ ಮಹಿಳಾ ಪೊಲೀಸ್ ಠಾಣೆಯ ಪೊಲೀಸರು, ಬೆಂಗಳೂರು ನಗರದ ಹಲವು ಹೊಟೆಲ್‌ಗಳಲ್ಲಿ ನಡೆಸುತ್ತಿದ್ದಂತಹ ಹೈಟೆಕ್ ವೇಶ್ಯಾವಾಟಿಕೆ ದಂಧೆಯ ಕುರಿತಂತೆ ಮಾಹಿತಿ ಸಂಗ್ರಹಿಸಿರುತ್ತಾರೆ. ಈ ಮಾಹಿತಿಯ ಪ್ರಕಾರ ಕೋರಮಂಗಲ, ಮಡಿವಾಳ ಹಾಗೂ ನಗರದ ಇತರೆ ಪ್ರದೇಶಗಳಲ್ಲಿ ದಾಳಿ ಕ್ರಮ ಕೈಗೊಳ್ಳಲಾಗಿದೆ. ಈ ಪ್ರಕರಣದಲ್ಲಿ 3 ಮಹಿಳಾ ಸಂತ್ರಸ್ತೆಯರನ್ನು ಸಂರಕ್ಷಣೆ ಮಾಡಲಾಗಿರುತ್ತದೆ.
ಈ ಕಾರ್ಯಾಚರಣೆಯನ್ನು ಈಶಾನ್ಯ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಶ್ರೀ ಲಕ್ಷ್ಮೀಪ್ರಸಾದ್ ಬಿ.ಎಂ, ಐಪಿಎಸ್ ರವರ ಮಾರ್ಗದರ್ಶನದಲ್ಲಿ, ಈಶಾನ್ಯ ವಿಭಾಗದ ಮಹಿಳಾ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಹಾಗೂ ಸಿಬ್ಬಂದಿಯವರು ಪ್ರಕರಣವನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಗಿರುತ್ತಾರೆ.