ಯುವತಿ ಮೇಲೆ ಆ್ಯಸಿಡ್​ ದಾಳಿ: ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

John Prem
2 0
Read Time:1 Minute, 56 Second

ಚಿಕ್ಕಮಗಳೂರು ಯುವತಿ ಮೇಲೆ ಆಸೀಡ್​ ದಾಳಿ ನಡೆಸಿದ್ದ ಅಪರಾಧಿಗಳಿಗೆ ಸೆಕೆಂಡ್ ಅಡಿಷನಲ್ ಡಿಸ್ಟ್ರಿಕ್ಟ್ ಆಂಡ್ ಸೆಷನ್ ಕೋರ್ಟ್ ಜೀವಾವಧಿ ಶಿಕ್ಷೆ ನೀಡಿದೆ. ದಿನಾಂಕ 18-04-2015ರಂದು ಈ ದುರ್ಘಟನೆ ಸಂಭವಿಸಿದ್ದು, ಪ್ರಕರಣದ ಆರೋಪಿಗಳಿಗೆ 5 ವರ್ಷ 11 ತಿಂಗಳು 1 ದಿನಗಳ ಬಳಿಕ ಶಿಕ್ಷೆ ಪ್ರಕಟವಾಗಿದೆ. ಈ ಬಗ್ಗೆ ಪ್ರಕರಣದ ಅಂದಿನ ತನಿಖಾಧಿಕಾರಿ ಈಗಿನ ಮಡಿವಾಳ ಎಸಿಪಿ ಸುಧೀರ್ ಹೆಗ್ಡೆ ಮಾಹಿತಿ ನೀಡಿದ್ದಾರೆ. ಚಿಕ್ಕ ಮಗಳೂರಿನ ಶೃಂಗೇರಿಯಲ್ಲಿ ನಡೆದಿದ್ದು, ದಾರಿ ಕೇಳುವ ನೆಪದಲ್ಲಿ ಅಪರಾಧಿಗಳು ಆಸಿಡ್ ಹಾಕಿದ್ದರು. ಕೂಡಲೇ ಆಕೆಯನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಯಿತು. ಆಸ್ಪತ್ರೆಗೆ ಹೋಗುವ ಸಂದರ್ಭದಲ್ಲಿ ನೊಂದ ಯುವತಿ ಗಣೇಶ್​ ಎಂದು ತಡವರಿಸುತ್ತಿದ್ದಳು. ಈ ಮಾಹಿತಿ ಮೇರೆಗೆ ತನಿಖೆ ನಡೆಸಿದಾಗ ಆರೋಪಿಗಳು ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಆರೋಪಿ ಗಣೇಶ್​ ನೊಂದ ಯುವತಿಯ ಪಕ್ಕದ ಮನೆಯವನಾಗಿದ್ದ. 2014ರಲ್ಲಿ ಯುವತಿಯನ್ನು ಮದುವೆ ಮಾಡಿಕೊಡುವಂತೆ ಕೇಳಿದ್ದಾನೆ. ಆದರೆ ಯುವತಿ ಗಣೇಶ್​ ಕುಡಿಯುತ್ತಾನೆ ಎನ್ನುವ ಕಾರಣ ನಿರಾಕರಿಸಿದ್ದಳು. ಇದೇ ಕೋಪಕ್ಕೆ ಗಣೇಶ್ ಯುವತಿ ಮೇಲೆ ಆಸಿಡ್​ ದಾಳಿ ಮಾಡುವಂತೆ​ ಕಬೀರ್ ಮತ್ತು ಮಜೀದ್ ಎಂಬಾತನಿಗೆ ಸುಪಾರಿ ನೀಡಿದ್ದ ಎನ್ನಲಾಗಿದೆ. ಪ್ರಕರಣದ ತನಿಖೆ ಅಂತ್ಯಗೊಂಡಿದ್ದು, ಆರೋಪಗಳಿಗೆ ಜೀವಾವಧಿ ಶಿಕ್ಷೆ ಪ್ರಕಟವಾಗಿದೆ. ನನ್ನ ಜೀವನ ಸಾರ್ಥಕತೆ ಹೊಂದಿದ ಪ್ರಕರಣ ಎಂದು ಎಸಿಪಿ ಸುಧೀರ್ ಹೆಗ್ಡೆ ಹೇಳಿದ್ದಾರೆ.

ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,

This image has an empty alt attribute; its file name is John_prem.jpg

ಜೆ .ಜಾನ್ ಪ್ರೇಮ್

Happy
Happy
100 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *

Next Post

ಸುದ್ದುಗುಂಟೆಪಾಳ್ಯ ಪೋಲಿಸರಿಂದ 2ಕೋಟಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ

ಐಷಾರಾಮಿ ಜೀವನಕ್ಕಾಗಿ ಅಡ್ಡದಾರಿ ಹಿಡಿದಿದ್ದ ವಿದ್ಯಾರ್ಥಿಗಳನ್ನು ಸುದ್ದುಗುಂಟೆಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಡ್ರಗ್ಸ್ ತರಿಸಿ ವಿದ್ಯಾರ್ಥಿಗಳು ಮಾರಾಟ ಮಾಡುತ್ತಿದ್ದರು. ವಿದ್ಯಾರ್ಥಿಗಳು ಕೇರಳ ಮೂಲದವರಾಗಿದ್ದು, ಅವರನ್ನು ಮೊಹಮ್ಮದ್ ಇರ್ಫಾನ್ ಹಾಗೂ ಥಾರಿ ಅಜೀಮ್ ಎಂದು ಗುರುತಿಸಲಾಗಿದೆ. ಸುದ್ದಗುಂಟೆಪಾಳ್ಯ ಠಾಣೆ ಪೊಲೀಸರು ನಡೆಸಿದ ಈ ಕಾರ್ಯಾಚರಣೆಯಲ್ಲಿ ವಿದ್ಯಾರ್ಥಿಗಳಿಂದ 2 ಕೋಟಿ ರೂ. ಮೌಲ್ಯದ 4 ಕೆಜಿ ಹಾಷಿಷ್ ಆಯಿಲ್(ಒಂದು ಮಾದರಿಯ ಮಾದಕ ದ್ರವ್ಯ)​ ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ಟೆಕ್ಕಿಗಳು ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ […]

Get News on Whatsapp

by send "Subscribe" to 7200024452
Close Bitnami banner
Bitnami