ಗಣೇಶ ಹಬ್ಬದ ಆಚರಣೆಗೆ ಸರ್ಕಾರದ ಮಾರ್ಗಸೂಚಿಯನ್ನು ಪಾಲಿಸಬೇಕು-ತಿಲಕ್ ನಗರ ಪೊಲೀಸ್

John Prem
2 0
Read Time:2 Minute, 0 Second

ಕರ್ನಾಟಕ ಸರ್ಕಾರವು ಭಾನುವಾರ (ಸೆಪ್ಟೆಂಬರ್ 5) ಕೋವಿಡ್ -19 ಸಾಂಕ್ರಾಮಿಕದ ನಡುವೆ ರಾಜ್ಯದಲ್ಲಿ ಗಣೇಶ ಚತುರ್ಥಿ ಹಬ್ಬವನ್ನು ಆಚರಿಸಲು ಮಾರ್ಗಸೂಚಿಗಳನ್ನು ಪ್ರಕಟಿಸಿದೆ.
ವಾರ್ಡ್​ಗೆ ಒಂದು ಗಣೇಶ ಮೂರ್ತಿ ಪ್ರತಿಷ್ಠಾಪಿಸುವಾಗ ಸರ್ಕಾರದ ಪರಿಷ್ಕೃತ ಮಾರ್ಗಸೂಚಿಯನ್ನು ಪಾಲಿಸಬೇಕು. ರಾಜ್ಯದಾದ್ಯಂತ ಐದು ದಿನಗಳ ಕಾಲ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಷರತ್ತುಬದ್ಧ ಅನುಮತಿ ನೀಡಲಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಭಾನುವಾರ ನಡೆದ ಕೋವಿಡ್‌ ನಿರ್ವಹಣೆಗೆ ಸಂಬಂಧಿಸಿದ ಉನ್ನತಮಟ್ಟದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.
ಪೊಲೀಸ್‌ ಇಲಾಖೆ ಹಾಗೂ ಸ್ಥಳೀಯ ಆಡಳಿತ ಸಂಸ್ಥೆಗಳು ವಿಧಿಸುವ ಷರತ್ತುಗಳನ್ನು ಪಾಲಿಸಿಕೊಂಡು ಗಣೇಶೋತ್ಸವ ಆಚರಣೆಗೆ ಅವಕಾಶ ನೀಡಲು ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಮೆರವಣಿಗೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ನಿಷೇಧ ಹೇರಲು ತೀರ್ಮಾನಿಸಲಾಗಿದೆ.
ಯಾವುದೇ ಕಾರಣಕ್ಕೂ ಗಣೇಶ ಪಟ್ಟಿ ನೀಡಬೇಡಿ ಎಂದು ತಿಲಕ್ ನಗರ ಠಾಣಾಧಿಕಾರಿ ಎಂ. ಎಲ್. ಗಿರೀಶ್ ಅವರು ಹೇಳಿದರು.

Mr. ML Girish- Inspector -Thilaknagar Police Station,Bengaluru

ತಿಲಕ್ ನಗರ ಪೊಲೀಸ್​​ ಠಾಣೆಯಲ್ಲಿ ಗಣೇಶೋತ್ಸವ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೊರೊನಾ ಸಂದರ್ಭದಲ್ಲಿ ಬಡವರಿಗೂ ಸೋಂಕು ತಗುಲಿದೆ. ಅಂತಹವರ ಅರೋಗ್ಯದ ಕಾಳಜಿ ವಹಿಸಿ ಅವರಿಗೆ ಮಾಸ್ಕ್, ಸ್ಯಾನಿಟೈಸರ್ ಕೊಡಿ, ಯಾವುದೇ ಕಾರಣಕ್ಕೂ ಗಣೇಶ ಪಟ್ಟಿ ಕೊಡಬೇಡಿ ಎಂದರು.

ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,

ಜೆ .ಜಾನ್ ಪ್ರೇಮ್
Happy
Happy
100 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *

Next Post

ಬಿಬಿಎಂಪಿ ಅನುಮತಿ ಪಡೆದು ಗಣೇಶ ಪ್ರತಿಷ್ಠಾಪಿಸಬೇಕು -ನಗರ ಪೊಲೀಸ್ ಆಯುಕ್ತ ಕಮಲ್ ಪಂತ್

ಗಣೇಶೋತ್ಸವ ಆಚರಣೆ ಕುರಿತು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಹೇಳಿಕೆ ನೀಡಿದ್ದು, 1 ವಾರ್ಡ್‌ಗೆ 1 ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಮಾತ್ರ ಅವಕಾಶ. ಗಣೇಶ ಮೂರ್ತಿ ಕೂರಿಸುವ ಆಯೋಜಕರು 2 ಡೋಸ್ ಕೊರೊನಾ ಲಸಿಕೆಯನ್ನು ಪಡೆದಿರಬೇಕು. ಎಲ್ಲಿ ಮೂರ್ತಿ ಇಡಬೇಕು ಎಂದು ಇನ್ಸ್‌ಪೆಕ್ಟರ್, ಎಸಿಪಿಗಳು ಪರಿಶೀಲಿಸಿ ಸ್ಥಳ ಗುರುತಿಸುತ್ತಾರೆ. ಈ ಬಗ್ಗೆ ಪೊಲೀಸ್ ಆಯುಕ್ತರು, ಅಧಿಕಾರಿಗಳ ಜತೆ ಚರ್ಚಿಸಿದ್ದೇವೆ. 3 ದಿನಕ್ಕಿಂತ ಹೆಚ್ಚು ಗಣೇಶಮೂರ್ತಿಯನ್ನ ಇಡುವಂತಿಲ್ಲ ಎಂದು ತಿಳಿಸಿದ್ದಾರೆ. […]

Get News on Whatsapp

by send "Subscribe" to 7200024452
Close Bitnami banner
Bitnami