Read Time:1 Minute, 9 Second
ಶಿರಸಿ ಲಯನ್ಸ್ ಪ್ರೌಢಶಾಲಾ ಸಭಾ ಭವನದಲ್ಲಿ, ಶಿರಸಿ ಉಪ-ವಿಭಾಗದ ಶಿರಸಿ, ಸಿದ್ದಾಪುರ, ಮುಂಡಗೋಡ, ಯಲ್ಲಾಪುರ ತಾಲ್ಲೂಕುಗಳ ಸರಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಆಟೋ ರಿಕ್ಷಾ, ಶಾಲಾ ವಾಹನ, ಮತ್ತು ಖಾಸಗಿ ವಾಹನಗಳಲ್ಲಿ ಶಾಲೆಗೆ ತೆರಳುವ ಶಾಲಾ ಮಕ್ಕಳ ಸುರಕ್ಷತೆ ಕುರಿತು ಚರ್ಚಿಸಲು ಸಭೆ ನಡೆಸಲಾಯಿತು. ಸಭೆಯಲ್ಲಿ ಆಟೋ ರಿಕ್ಷಾ, ಶಾಲಾ ವಾಹನ, ಮತ್ತು ಖಾಸಗಿ ವಾಹನಗಳಲ್ಲಿ ಶಾಲೆಗೆ ತೆರಳುವ ಶಾಲಾ ಮಕ್ಕಳ ಸುರಕ್ಷತೆ ಕುರಿತು ಈವರೆಗೆ ತೆಗದುಕೊಂಡಿರುವ ಕ್ರಮಗಳು ಮತ್ತು ಮುಂದಿನ ದಿನಗಳಲ್ಲಿ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಚರ್ಚಿಸಲಾಯಿತು. ಸಭೆಯಲ್ಲಿ ಶಿರಸಿ ಸಾರಿಗೆ ಅಧಿಕಾರಿಗಳು, ಕೆಎಸ್‌ಆರ್‌ಟಿಸಿ ಡಿಸಿ, ಶಿಕ್ಷಣ ಇಲಾಖೆ ಅಧಿಕಾರಿಗಳು, ಶಾಲಾ ಮುಖ್ಯೋಪಾಧಾಯರು, ಶಾಲಾ ಆಡಳಿತ ಮಂಡಳಿ ಸದಸ್ಯರು, ಆಟೋ ರಿಕ್ಷಾ ಯೂನಿಯನ್ ಪದಾಧಿಕಾರಿಗಳು ಹಾಜರಿದ್ದು ಸಹಕಾರ ನೀಡಿದರು.
