ಬೆಂಗಳೂರು ನಗರ ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿಗಳು ದಿನಾಂಕ 14-06-2023 ರಂದು ಉಪ್ಪಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧವಾಗಿರುವ ವಿದೇಶಿ ಕಂಪನಿಗಳ ಸಿಗರೇಟ್‌ಗಳನ್ನು ಅನಧಿಕೃತವಾಗಿ ಸಂಗ್ರಹಿಸಿಡಲಾಗಿದ್ದ ಗೋಡೌನ್ ಮೇಲೆ ದಾಳಿ ಕಾರ್ಯಾಚರಣೆ ನಡೆಸಿ ಸುಮಾರು 14,90,500/-ರೂ ಮೌಲ್ಯದ ವಿವಿಧ ಕಂಪನಿಗಳ 4650 ಪ್ಯಾಕ್ ಫಾರಿನ್ ಸಿಗರೇಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬಂಧಿತ ಆರೋಪಿಯು ಭಾರತ ಸರ್ಕಾರದಿಂದ ನಿಷೇಧವಾಗಿರುವ ವಿದೇಶಿ ಸಿಗರೇಟ್‌ಗಳನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಾ ಅಕ್ರಮ ಲಾಭಗಳಿಸುತ್ತಿದುದ್ದಲ್ಲದೇ ಸಾಮಾಜಿಕ ಸ್ವಾಸ್ಥ್ಯ ಹಾಳು ಮಾಡುತ್ತಿದ್ದನು. ಈತನ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ನೀಡಿದ ದೂರಿನ ಮೇರೆಗೆ ಉಪ್ಪಾರ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆಯಲ್ಲಿರುತ್ತದೆ.
ಈ ಕಾರ್ಯಾಚರಣೆಯನ್ನು ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡವು ಯಶಸ್ವಿಯಾಗಿ ಕೈಗೊಂಡಿರುತ್ತಾರೆ.
ಅನಧಿಕೃತವಾಗಿ ಸಂಗ್ರಹಿಡಿಸಲಾಗಿದ್ದ Foreign Cigarette ಗೋಡೌನ್ ಮೇಲೆ ದಾಳಿ ಸುಮಾರು 14,90,500/-ರೂ ಮೌಲ್ಯದ ವಿವಿಧ ಕಂಪನಿಗಳ 4650 ಫಾರಿನ್ ಸಿಗರೇಟ್ ಪ್ಯಾಕ್ ಗಳ ವಶ

Read Time:1 Minute, 23 Second