ರಸ್ತೆ ಸುರಕ್ಷತೆ ಹಾಗೂ ಪೋಕ್ಸೋ ಕಾಯ್ದೆ ಕುರಿತು ವಿಶೇಷ ಕಾರ್ಯಾಗಾರ

Admin
0 0
Read Time:2 Minute, 15 Second

ಯುವಕರು ದುಶ್ಚಟಗಳಿಗೆ ದಾಸರಾಗದೆ ಉತ್ತಮ ಮಾರ್ಗದಲ್ಲಿ ನಡೆಯಬೇಕು,ಚಾಲನಾ ಪರವಾನಿಗೆ ಪಡೆದ ನಂತರವಷ್ಟೇ ವಾಹನಗಳನ್ನು ಚಲಾಯಿಸಬೇಕು,ಮೊಬೈಲ್ ಗಳನ್ನು ಸತ್ಕಾರ್ಯಗಳಿಗೆ ಮಾತ್ರ ಬಳಸಬೇಕು ಎಂದು.
ದಾವಣಗೆರೆ ಗ್ರಾಮಾಂತರ ಪೊಲೀಸ್ ಉಪ ವಿಭಾಗ ದ ಉಪಾಧೀಕ್ಷಕರಾದ ನರಸಿಂಹ ವಿ.ತಾಮ್ರಧ್ವಜ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು ಅವರು ದಿನಾಂಕ 12-02-2021 ರಂದು ಹರಿಹರದ ಸಂತ ಅಲೋಶಿಯಸ್ ಕಾಲೇಜಿನ ಆಶ್ರಯದಲ್ಲಿ ದಾವಣಗೆರೆ ಜಿಲ್ಲಾ ಪೊಲೀಸ್ ಹಾಗೂ ಹರಿಹರ ಗ್ರಾಮಾಂತರ ಪೋಲಿಸ್ ಠಾಣೆಯ ಸಹಭಾಗಿತ್ವದಲ್ಲಿ ಏರ್ಪಡಿಸಿದ್ದ ರಸ್ತೆ ಸುರಕ್ಷತೆ ಹಾಗೂ ಪೋಕ್ಸೋ ಕಾಯ್ದೆ ಯನ್ನು ಕುರಿತ ಕಾರ್ಯಾಗಾರದಲ್ಲಿ ಮಾತನಾಡುತ್ತಾ ವಿದ್ಯಾರ್ಥಿಗಳು ಸುರಕ್ಷತೆಯ ನಿಯಮಗಳನ್ನು ಸರಿಯಾಗಿ ಪಾಲಿಸಿದರೆ ಅವರ ಭವಿಷ್ಯ ಸುಗಮವಾಗಿರುತ್ತದೆ ಎಂದು ಆಶಿಸಿದರು.


ಹರಿಹರದ ವೃತ್ತ ನಿರೀಕ್ಷಕರಾದ ಶ್ರೀ ಸತೀಶ್ ಕುಮಾರ್ ಅವರು ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆಯನ್ನು ಕುರಿತು ಮಾತನಾಡಿ ಮೊಬೈಲ್ ನ ದುರ್ಬಳಕೆಯನ್ನು ಕುರಿತು ಜಾಗರೂಕರಾಗಿರಬೇಕು ಎಂದು ಕಿವಿಮಾತು ಹೇಳಿದರು.ಅತಿಥಿಗಳನ್ನು ಈ ಕಾರ್ಯಾಗಾರದದಲ್ಲಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ರಸ್ತೆ ಸುರಕ್ಷತೆ ಹಾಗೂ ಪೋಕ್ಸೋ ಕಾಯ್ದೆ ಯನ್ನು ಕುರಿತು ವಿಡಿಯೊ ತುಣುಕುಗಳನ್ನು ಪ್ರದರ್ಶಿಸಲಾಯಿತು. ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಾಯಿತು.
ಈ ಕಾರ್ಯಾಗಾರದಲ್ಲಿ ಹರಿಹರ ಗ್ರಾಮಾಂತರ ಪೋಲಿಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ರವಿಕುಮಾರ್,ಪ್ರಾಂಶುಪಾಲರಾದ ಸನ್ನಿ ಗುಡಿನೋ, ಉಪ ಪ್ರಾಂಶುಪಾಲರಾದ ಶ್ರೀಮತಿ ಪುಷ್ಪಲತಾ ಅರಸ್ ಪ್ರಿನ್ಸಿ ಫ್ಲಾವಿಯಾ ಪಿಂಟೋ ಹಾಗೂ ಸಂಯೋಜಕರಾದ ಟಿ ಎಸ್ ಮಂಜುನಾಥ್ ಉಪಸ್ಥಿತರಿದ್ದರು .

ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,

This image has an empty alt attribute; its file name is John_prem.jpg
ಶ್ರೀ .ಜಾನ್ ಪ್ರೇಮ್

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *

Next Post

ಬಾಲಕಾರ್ಮಿಕರ ತಪಾಸಣೆ

ದಿನಾಂಕ: 15-02-2021 ರಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ದೂರಿನ ಆಧಾರದ ಮೇಲೆ ಕೊಡಗು ಜಿಲ್ಲೆಯ ಮಕ್ಕಳ ವಿಶೇಷ ಪೊಲೀಸ್‍ ಘಟಕ, ಕಾರ್ಮಿಕ ಇಲಾಖೆ, ಮಕ್ಕಳ ರಕ್ಷಣಾ ಘಟಕದ ವತಿಯಿಂದ ಸೋಮವಾರಪೇಟೆ ತಾಲ್ಲೂಕಿನ ಸುಂಟಿಕೊಪ್ಪದಲ್ಲಿ ವಿವಿಧ ವಾಣಿಜ್ಯ ಸಂಸ್ಥೆಗಳು ಹೋಟೆಲ್ ಗಳಲ್ಲಿ ಬಾಲಕಾರ್ಮಿಕ ತಪಾಸಣೆ ಹಮ್ಮಿಕೊಳ್ಳಲಾಯಿತು.ಮುಗ್ದ ಮಕ್ಕಳನ್ನು ಶೋಷಣೆ ಮಾಡುವವರ ವಿರುದ್ದ ಸರ್ಕಾರ ವಿಶೇಷ ಕಾನೂನನ್ನು ರೂಪಿಸಿದೆ. ಎಲ್ಲಿಯೇಯಾಗಲಿ 18 ವರ್ಷ ವಯಸ್ಸಿನ ಒಳಗಿರುವ ಬಾಲಕ ಬಾಲಕಿಯರನ್ನು ಕೆಲಸಕ್ಕೆ ನೇಮಿಸಿಕೊಂಡು […]

Get News on Whatsapp

by send "Subscribe" to 7200024452
Close Bitnami banner
Bitnami