ಐಷಾರಾಮಿ ಜೀವನಕ್ಕಾಗಿ ಅಡ್ಡದಾರಿ ಹಿಡಿದಿದ್ದ ವಿದ್ಯಾರ್ಥಿಗಳನ್ನು ಸುದ್ದುಗುಂಟೆಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಡ್ರಗ್ಸ್ ತರಿಸಿ ವಿದ್ಯಾರ್ಥಿಗಳು ಮಾರಾಟ ಮಾಡುತ್ತಿದ್ದರು. ವಿದ್ಯಾರ್ಥಿಗಳು ಕೇರಳ ಮೂಲದವರಾಗಿದ್ದು, ಅವರನ್ನು ಮೊಹಮ್ಮದ್ ಇರ್ಫಾನ್ ಹಾಗೂ ಥಾರಿ ಅಜೀಮ್ ಎಂದು ಗುರುತಿಸಲಾಗಿದೆ. ಸುದ್ದಗುಂಟೆಪಾಳ್ಯ ಠಾಣೆ ಪೊಲೀಸರು ನಡೆಸಿದ ಈ ಕಾರ್ಯಾಚರಣೆಯಲ್ಲಿ ವಿದ್ಯಾರ್ಥಿಗಳಿಂದ 2 ಕೋಟಿ ರೂ. ಮೌಲ್ಯದ 4 ಕೆಜಿ ಹಾಷಿಷ್ ಆಯಿಲ್(ಒಂದು ಮಾದರಿಯ ಮಾದಕ ದ್ರವ್ಯ) ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ಟೆಕ್ಕಿಗಳು ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರುತ್ತಿದ್ದರು ಎಂದು ತಿಳಿದು ಬಂದಿದೆ.
ಬೆಂಗಳೂರು ನಗರದ ಆಗ್ನೇಯದ ಮೈಕೊ ಲೇಔಟ್ ಉಪ ವಿಭಾಗದ ಎಸಿಪಿ ಶ್ರೀ . ಎಂ. ಎನ್. ಕರಿಬಸವನಗೌಡ , ಸುದ್ದುಗುಂಟೆಪಾಳ್ಯ ಠಾಣಾಧಿಕಾರಿ ಶ್ರೀ. ನಟರಾಜ್ ಮತ್ತು ತಂಡದವರು ಈ ಕಾರ್ಯಾಚರಣೆಯನ್ನು ನಡೆಸಿದ್ದಾರೆ. ಆರೋಪಿಗಳಾದ ಮೊಹಮ್ಮದ್ ಇರ್ಫಾನ್ 24 ಹಾಗೂ ಥಾರಿ ಅಜೀಮ್ 26 ವರ್ಷದವರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸುದ್ದಗುಂಟೆಪಾಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು ಟ್ವಿಟ್ಟರ್ ಗೆ ಕರೆದೊಯ್ದರು, ಅಂತರರಾಜ್ಯದ ಇಬ್ಬರು ಡ್ರಗ್ ಪೆಡ್ಲರ್ ಗಳನ್ನು ಬಂಧಿಸಿ ನಾಲ್ಕು ಕೆಜಿ ಹ್ಯಾಶಿಶ್ ಎಣ್ಣೆಯನ್ನು ವಶಪಡಿಸಿಕೊಂಡ ಎಸ್. ಜಿ. ಪಾಳ್ಯ ಪೊಲೀಸ್ ತಂಡವನ್ನು ಶ್ಲಾಘಿಸಿದರು.
ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,
ಜೆ .ಜಾನ್ ಪ್ರೇಮ್