ಪ್ರತಿ ವರ್ಷ ಅಕ್ಟೋಬರ್ 21ರಂದು ಆಚರಿಸಲಾಗುವ ಪೊಲೀಸ್ ಹುತಾತ್ಮರ ದಿನವನ್ನು ಇಂದು ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಆಚರಿಸಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ, ಐಪಿಎಸ್ರವರು ಪ್ರಾಸ್ತಾವಿಕ ಭಾಷಣ ಮಾಡಿ 2020-21ನೇ ಸಾಲಿನಲ್ಲಿ ಕರ್ತವ್ಯದ ಸಮಯದಲ್ಲಿ ಹುತಾತ್ಮರಾದ ದೇಶದ ಎಲ್ಲಾ ರಾಜ್ಯಗಳ ಮತ್ತು ಇತರೆ ಕೇಂದ್ರೀಯ ಪೊಲೀಸ್ ಪಡೆಗಳ ಅಧಿಕಾರಿ ಮತ್ತು ಸಿಬ್ಬಂದಿಗಳ ಹೆಸರುಗಳನ್ನು ಓದುವ ಮೂಲಕ ಸ್ಮರಿಸಿದರು. ಸಮಾರಂಭದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀ ಜಿ.ಬಿ.ಲಗಮಪ್ಪರವರು ಹುತಾತ್ಮರ ಸ್ಮಾರಕಕ್ಕೆ ಹೂ ಗುಚ್ಛ ಅರ್ಪಿಸುವ ಮೂಲಕ ಈ ವರ್ಷ ಕರ್ತವ್ಯದಲ್ಲಿ ಹುತಾತ್ಮರಾದ ಪೊಲೀಸರಿಗೆ ಶಾಂತಿಯನ್ನು ಕೋರಿದರು. ಅಲ್ಲದೆ ಇತರ ಗಣ್ಯರು ಪೊಲೀಸ್ ಹುತಾತ್ಮರ ಸ್ಮಾರಕಕ್ಕೆ ಹೂಗುಚ್ಛವನ್ನು ಸಮರ್ಪಿಸಿದರು.