ಪೊಲೀಸ್ ಅಧೀಕ್ಷಕರವರಾದ ಶ್ರೀ ಸಿ.ಬಿ.ರಿಷ್ಯಂತ್ ಐಪಿಎಸ್ ರವರಿಂದು ಮಾನ್ಯ ಜಿಲ್ಲಾಧಿಕಾರಿಗಳಾದ ಶ್ರೀ ಮಹಾಂತೇಶ್ ಬೀಳಗಿ ರವರ ನೇತೃತ್ವದಲ್ಲಿ ದಾವಣಗೆರೆ ನಗರದ ಹಳೇ ಭಾಗಗಳಾದ ಆಜಾದ್ ನಗರ ಹಾಗೂ ಮಂಡಕ್ಕಿ ಭಟ್ಟಿ ಪ್ರದೇಶಗಳಲ್ಲಿ ಕೊರೊನ ಲಸಿಕೆ ಹಾಗೂ ಮಾಸ್ಕ್ ಅಭಿಯಾನ ನಡೆಸುವ ಮೂಲಕ ಲಸಿಕೆ ಪಡೆಯದವರಿಗೆ ಮೊದಲ ಹಾಗೂ ಎರಡನೇ ಡೋಸ್ ಲಸಿಕೆ ನೀಡಲಾಯಿತು.ಮಾಸ್ಕ್ ಬಗೆಗೂ ಜಾಗೃತಿ ಮೂಡಿಸಲಾಗುತ್ತಿದ್ದು ಇನ್ನು ಮುಂದೆ ಸಾರ್ವಜನಿಕರು ಎಚ್ಚೆತ್ತುಕೊಂಡು ಮಾಸ್ಕ್ ಧರಿಸಬೇಕೆಂದರು.ಅಭಿಯಾನದಲ್ಲಿ ಸಿಇಓ ರವರಾದ ಡಾ. ವಿಜಯ ಮಹಾಂತೇಶ್ ದಾನಮ್ಮನವರ್ , ಅಪರ ಜಿಲ್ಲಾಧಿಕಾರಿಗಳಾದ ಶ್ರೀ ಸದಾಶಿವ ಪ್ರಭು, ಮಹಾನಗರ ಪಾಲಿಕೆ ಆಯುಕ್ತರಾದ ಶ್ರೀವಿಶ್ವನಾಥ್ ಮುದಜ್ಜಿ, ಡಿಹೆಚ್ಒ ಡಾ. ನಾಗರಾಜ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಾಘವನ್, ನಗರ ಉಪವಿಭಾಗದ ಡಿವೈಎಸ್ಪಿ ಶ್ರೀ ನರಸಿಂಹ ವಿ.ತಾಮ್ರದ್ವಜ, ಆರ್ಸಿಹೆಚ್ ಅಧಿಕಾರಿ ಡಾ. ಮೀನಾಕ್ಷಿ, ಸಮಾಜ ಕಲ್ಯಾಣಾಧಿಕಾರಿ ಕೌಸರ್ ರೇಷ್ಮ ಸೇರಿದಂತೆ ಆರೋಗ್ಯ ಇಲಾಖೆ & ಪೊಲೀಸ್ ಇಲಾಖೆ ಅಧಿಕಾರಿ, ಸಿಬ್ಬಂದಿಗಳಿದ್ದರು