ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವತಿಯಿಂದ ಕಾನೂನು ಮಾಹಿತಿ

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ವ್ಯಾಪ್ತಿಯಲ್ಲಿ ಮುಂಬರುವ ವಿಧಾನ ಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಾನ್ಯ ಪೊಲೀಸ್ ಅಧೀಕ್ಷಕರಾದ ಡಾ || ವಿಕ್ರಮ್ ಅಮಟೆ ಐ.ಪಿ.ಎಸ್ ರವರು ದಿನಾಂಕ 19.03.2023 ರಂದು ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯ ಪೊಲೀಸ್ ಅಧಿಕಾರಿ/ಸಿಬ್ಬಂದಿಗಳ ಬ್ರಿಫಿಂಗ್ ಸಭೆ ನಡೆಸಿ, ಸಿಬ್ಬಂದಿಗಳ ಕುಂದುಕೊರತೆಗಳನ್ನು ವಿಚಾರಿಸಿ, ಮುಂಬರುವ ಚುನಾವಣೆಗೆ ಸಂಬಂದಿಸಿದ ಕಾನೂನುಗಳ ಬಗ್ಗೆ ಮಾಹಿತಿ ನೀಡಿ, ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸುವ ಬಗ್ಗೆ ಮಾರ್ಗದರ್ಶನ ನೀಡಿರುತ್ತಾರೆ.

\"\"

ಸದರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸೂಕ್ಷ್ಮ ಮತಗಟ್ಟೆಗಳಿಗೆ ಭೇಟಿ ನೀಡಿ ಪೂರ್ವಸಿದ್ದತೆಗಳನ್ನು ಪರಿಶೀಲಿಸಿ, ಚುನಾವಣೆ ಸೂಕ್ಷ್ಮ ಪ್ರದೇಶಗಳಿಗೆ ಭೇಟಿ ನೀಡಿ ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸುವ ನಿಟ್ಟಿನಲ್ಲಿ ಸಿಟಿಜನ್ ಕಮಿಟಿ ಸಭೆ ನಡೆಸಿರುತ್ತಾರೆ. ಮುಂಬರುವ ಚುನಾವಣೆ ಕರ್ತವ್ಯಕ್ಕೆ ಜಿಲ್ಲೆಗೆ ಆಗಮಿಸುವ ಅರೆ ಸೇನಾಪಡೆಗಳಿಗೆ ವಾಸ್ತವ್ಯ ಕಲ್ಪಿಸಲು ಗುರುತಿಸಿರುವ ಶಾಲೆ/ಕಾಲೇಜುಗಳಿಗೆ ಭೇಟಿ ನೀಡಿ ಸುರಕ್ಷತೆ & ಮೂಲಭೂತ ಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಿರುತ್ತಾರೆ .

\"\"

ಬೆಳ್ತಂಗಡಿ ಪೊಲೀಸ್ ಸರ್ಕಲ್ ವ್ಯಾಪ್ತಿಗೆ ಸಂಬಂಧಪಟ್ಟ ಪ್ರಕರಣಗಳಲ್ಲಿ ಸಂತ್ರಸ್ಥರ ಜೊತೆ ಸಂತ್ರಸ್ಥರ ಸಭೆ (victim meeting) ನಡೆಸಿ, ಪ್ರಕರಣಗಳ ಪ್ರಸ್ತುತ ಹಂತದ ಬಗ್ಗೆ ಮಾಹಿತಿ ನೀಡಿ, ಸಮಸ್ಯೆಗಳ ಬಗ್ಗೆ ವಿಚಾರಿಸಿ,ಸ್ಥಳೀಯ ಪೊಲೀಸ್ ಅಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಿರುತ್ತಾರೆ.

Leave a Reply

Your email address will not be published. Required fields are marked *