ರಾಜರಾಜೇಶ್ವರಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಪೇಸ್ಟೀಜ್ ಭಾಗಮನೆ ಟೆಂಪಲ್ ಬೆಲ್ಟ್ ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿದ್ದ ಶ್ರೀ ಕಾರ್ತಿಕ ಕಿರಣ್ ರವರ ಮನೆಯಲ್ಲಿ ಚಿನ್ನದ ಆಭರಣಗಳು ಹಾಗೂ ನಗದು ಹಣ ಕಳವು ಆಗಿದ್ದು, ಕಾರು ಚಾಲಕನ ಮೇಲೆ ಅನುಮಾನವಿರುತ್ತದೆ ಎಂದು ನೀಡಿದ ದೂರಿನ ಮೇರೆಗೆ ಈ ಬಗ್ಗೆ ರಾಜರಾಜೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ಕಳವು ಪ್ರಕರಣ ದಾಖಲಾಗಿರುತ್ತದೆ.
ಪ್ರಕರಣದ ತನಿಖೆಯನ್ನು ಮುಂದುವರೆಸಿ, ದಿನಾಂಕ:-11-06-2023 ರಂದು ಆರೋಪಿಯಾದ ಕಾರು ಚಾಲಕನನ್ನು ದಸ್ತಗಿರಿ ಮಾಡಿ ಆತನಿಂದ ಮಾಲೀಕರಾದ ಕಾರ್ತಿಕ್ ಕಿರಣ್ ರವರ ಮನೆಯಿಂದ ಆರೋಪಿ ಚಾಲಕನು ಚಿನ್ನದ ಆಭರಣಗಳು ಮತ್ತು ಮೊಬೈಲ್ ಪೋನ್‌ನ್ನು ಕಳವು ಮಾಡಿದ್ದಾಗಿ ಒಪ್ಪಿಕೊಂಡಿರುತ್ತಾರೆ. ಸದರಿ ಆರೋಪಿಯಿಂದ ಸುಮಾರು 4,00,000/- ರೂ ಬೆಲೆ ಬಾಳುವ 67 ಗ್ರಾಂ ತೂಕದ ಚಿನ್ನದ ಆಭರಣಗಳು, ಒಂದು ಮೊಬೈಲ್ ಪೋನ್ ಹಾಗೂ ಕೃತ್ಯಕ್ಕೆ ಉಪಯೋಗಿಸಿದ್ದ ಹೊಂಡಾ ಆಕ್ಟಿವಾ ವಾಹನವನ್ನು ವಶಪಡಿಸಿಕೊಳ್ಳಲಾಗಿರುತ್ತದೆ.
ಕಾರ್ಯಚರಣೆಯನ್ನು ಬೆಂಗಳೂರು ನಗರದ ಡಿ.ಸಿ.ಪಿ(ಪಶ್ಚಿಮ) – ಲಕ್ಷ್ಮಣ್.ಬ.ನಿಂಬರಗಿ, ಕೆಂಗೇರಿಗೇಟ್ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀ ಭರತ್.ಎಸ್.ರೆಡ್ಡಿ ರವರುಗಳ ಮಾರ್ಗದರ್ಶನದಲ್ಲಿ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸಪೆಕ್ಟರ್ ಶ್ರೀ. ಎಂ. ಶಿವಣ್ಣ ರವರ ನೇತೃತ್ವದಲ್ಲಿ ಸಿಬ್ಬಂದಿಯವರ ತಂಡ ಕಾರ್ಯಚರಣೆಯನ್ನು ಕೈಗೊಂಡು ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿರುತ್ತಾರೆ.