ಜ್ಞಾನಭಾರತಿ ಪೊಲೀಸ್ ಠಾಣೆಯ ಸರಹದ್ದಿನಲ್ಲಿ, ಹ್ಯಾಂಡಲ್ ಲಾಕ್ ಮುರಿದು ದ್ವಿಚಕ್ರ ವಾಹನವನ್ನು ಕಳುವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ದಸ್ತಗಿರಿ ಮಾಡಿ, ಆರೋಪಿಗಳ ಮಾಹಿತಿ ಮೇರೆಗೆ ಬೆಂಗಳೂರು ನಗರದ ವಿವಿಧ ಪೊಲೀಸ್ ಠಾಣೆಗಳಾದ ಬ್ಯಾಡರಹಳ್ಳಿ, ಮಾಗಡಿ ರಸ್ತೆ, ವಿಜಯನಗರ ಮತ್ತು ಚಂದ್ರಲೇಔಟ್, ತಲಾ ಒಂದು ಪ್ರಕರಣಗಳು ಹಾಗೂ ಜ್ಞಾನಭಾರತಿ ಪೊಲೀಸ್ ಠಾಣೆಯ 3 ದ್ವಿಚಕ್ರವಾಹನ ವಾಹನಗಳ ಪ್ರಕರಣಗಳು ಪತ್ತೆಯಾಗಿರುತ್ತವೆ.
ಈ ಕಾರ್ಯಾಚರಣೆಯನ್ನು ಬೆಂಗಳೂರು ನಗರದ ಪಶ್ಚಿಮ ವಿಭಾಗದ ಉಪ ಪೊಲೀಸ್ ಕಮೀಷನರ್ ರವರಾದ ಡಾ ಲಕ್ಷ್ಮಣ ನಿಂಬರಗಿ, ರವರ ಸೂಕ್ತ ಮಾರ್ಗದರ್ಶನದಲ್ಲಿ, ಕೆಂಗೇರಿ ಉಪ ವಿಭಾಗದ ಸಹಾಯಕ ಪೊಲೀಸ್ ಕಮೀಷನರ್ ರವರಾದ ಶ್ರೀ.ಹೆಚ್.ಎಸ್.ಪರಮೇಶ್ವರ್ ರವರ ನಿರ್ದೇಶನದಲ್ಲಿ ಜ್ಞಾನಭಾರತಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಶ್ರೀ ಸುಬ್ರಮಣಿ ಮತ್ತು ಸಿಬ್ಬಂದಿಗಳು ಕಾರ್ಯಾಚರಣೆಯನ್ನು ಕೈಗೊಂಡು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.
ಈ ಮೇಲ್ಕಂಡ ಅಧಿಕಾರಿಗಳ ಮತ್ತು ಸಿಬ್ಬಂದಿಯವರುಗಳ ಕರ್ತವ್ಯವನ್ನು ಪೊಲೀಸ್ ಆಯುಕ್ತರು, ಬೆಂಗಳೂರು ನಗರ ಮತ್ತು ಅಪರ ಪೊಲೀಸ್ ಆಯುಕ್ತರು ಪಶ್ಚಿಮ ರವರು ಪ್ರಶಂಸಿರುತ್ತಾರೆ.
ವರದಿ : ಆಂಟೋನಿ ಬೇಗೂರು