ನಂದಿನಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ, ಲಗ್ಗೆರೆಯ ಚೌಡೇಶ್ವರಿನಗರ ದಲ್ಲಿ ನಿಲ್ಲಿಸಿದ್ದ ಹೋಂಡಾ ಡಿಯೋ ದ್ವಿಚಕ್ರವಾಹನವು ಕಳುವಾಗಿರುತ್ತದೆಂದು, ಹಿರಾದಿಯು ನೀಡಿದ ದೂರಿನ ಮೇರೆಗೆ, ನಂದಿನಿಲೇಔಟ್ ಪೊಲೀಸ್ ಠಾಣೆಯಲ್ಲಿ ದ್ವಿಚಕ್ರವಾಹನ ಕಳವು ಪ್ರಕರಣ ದಾಖಲಾಗಿದ್ದು, ದಿನಾಂಕ:-177,2023 ರಂದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಒಬ್ಬ ಆರೋಪಿಯನ್ನು ದಸ್ತಗಿರಿ ಮಾಡಿ ಆತನು ನೀಡಿದ ಮಾಹಿತಿ ಮೇರೆಗೆ ಸುಮಾರು 8.5 ಲಕ್ಷ ರೂ. ಬೆಲೆ ಬಾಳುವ | ಆಟೋರಿಕ್ಷಾ ಮತ್ತು ವಿವಿಧ ಕಂಪನಿಯ 13 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.
ಈ ಪ್ರಕರಣದಲ್ಲಿ ಆರೋಪಿಯನ್ನು ಹೆಚ್ಚಿನ ವಿಚಾರಣೆಗೊಳಪಡಿಸಿದಾಗ, ಆರೋಪಿಯು ಎಂ.ಓ.ಅಸಾಮಿಯಾಗಿದ್ದು, ಈ ಹಿಂದೆ ಚಂದ್ರಲೇಔಟ್, ಜ್ಞಾನಭಾರತಿ, ಆಡುಗೋಡಿ, ನಂದಿನಿಲೇಔಟ್, ಕಗ್ಗಲಿಪುರ ಪೊಲೀಸ್ ಠಾಣೆಗಳಲ್ಲಿ ದ್ವಿಚಕ್ರವಾಹನ ಕಳವು ಪ್ರಕರಣಗಳಲ್ಲಿ ಜೈಲಿಗೆ ಹೋಗಿ ಬಂದಿರುತ್ತಾನೆ.
ಆರೋಪಿಯ ಬಂಧನದಿಂದ ನಂದಿನಿ ಲೇಔಟ್ ತಲಘಟ್ಟಪುರ ವಿಜಯನಗರ ಹೆಬ್ಬಾಳ,ಅನ್ನಪೂರ್ಣೇಶ್ವರಿನಗರ, ಬಾಗಲಗುಂಟೆ, ಮಹಾಲಕ್ಷ್ಮಿಲೇಔಟ್ ಹಾಗೂ ನಾಗಮಂಗಲ ಪೊಲೀಸ್ ಠಾಣೆ ಸೇರಿದಂತೆ ಒಟ್ಟು 14 ವಾಹನ ಕಳವು ಪ್ರಕರಣಗಳು ಪತ್ತೆಯಾಗಿರುತ್ತವೆ,
ಬೆಂಗಳೂರು ನಗರ, ಉತ್ತರ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಶ್ರೀ ಶಿವ ಪ್ರಕಾಶ್ ದೇವರಾಜು, ರವರ ಮಾರ್ಗದರ್ಶನದಲ್ಲಿ, ಶ್ರೀ ಪ್ರವೀಣ್ ಎಂ, ಎಸಿಪಿ ಮಲ್ಲೇಶ್ವರಂ ಉಪ ವಿಭಾಗ ಮತ್ತು ಶ್ರೀ ವೆಂಕಟೇಗೌಡ, ಪೊಲೀಸ್ ಇನ್ಸ್‌ಪೆಕ್ಟರ್, ನಂದಿನಿಲೇಔಟ್ ಪೊಲೀಸ್ ಠಾಣೆ ರವರ ನೇತೃತ್ವದ ತಂಡ ಆರೋಪಿಯನ್ನು ದಸ್ತಗಿರಿ
ಮಾಡುವಲ್ಲಿ ಯಶಸ್ವಿಯಾಗಿರುತ್ತಾರೆ.
ಈ ಉತ್ತಮ ಕಾರ್ಯವನ್ನು ಬೆಂಗಳೂರು ನಗರದ ಪೊಲೀಸ್ ಆಯುಕ್ತರಾದ ಶ್ರೀ.ಬಿ.ದಯಾನಂದ ರವರು ಮತ್ತು ಪಶ್ಚಿಮ ವಿಭಾಗದ ಅಪರ ಪೊಲೀಸ್ ಆಯುಕ್ತರಾದ ಶ್ರೀ. ಎನ್.ಸತೀಶ್ ಕುಮಾರ್ ರವರು ಶ್ಲಾಘಿಸಿರುತ್ತಾರೆ.