ವಿ.ವಿ.ಪುರಂ ಪೊಲೀಸ ಠಾಣಾ ಸರಹದ್ದಿನಲ್ಲಿ, ಗೋವಾದಿಂದ ಮಾದಕ ವಸ್ತುವಾದ ಎಂ.ಡಿ.ಎಂ.ಎ ನ್ನು ಕಡಿಮೆ ಬೆಲೆಗೆ ಖರೀದಿ ಮಾಡಿಕೊಂಡು ಬಂದು, ಪಾರ್ಟಿ ಮತ್ತು ಇತರೆ ಮೋಜು-ಮಸ್ತಿಯ ಕೂಟಗಳಿಗೆ ಬರುವ ಕಾಲೇಜು ವಿದ್ಯಾರ್ಥಿಗಳು, ಸಾಫ್ಟ್‌ವೇರ್ ಇಂಜೀನಿಯರುಗಳಿಗೆ ನೀಡುತ್ತಿರುವ ಬಗ್ಗೆ ಖಚಿತ ಮಾಹಿತಿ ಬಂದ ಮೇರೆಗೆ, ದಿನಾಂಕ: 22/07/2023 ರಂದು ನೈಜೀರಿಯಾ ಮೂಲದ ವ್ಯಕ್ತಿಯನ್ನು ಬಂಧಿಸಿ, ಆತನ ಬಳಿ ಇದ್ದ 1 ಕೆಜಿ 20 ಗ್ರಾಂ ಎಂ.ಡಿ.ಎಂ.ಎ ಮತ್ತು ಮಾರಾಟ ಮಾಡಲು ಬಳಸಿದ ದ್ವಿ-ಚಕ್ರ ವಾಹನ, ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದೆ.
ಪ್ರಕರಣ ದಾಖಲಿಸಿ ತನಿಖೆಯ ಸಲುವಾಗಿ ಆತನು ವಾಸಿಸುತ್ತಿದ್ದ ಮನೆಗೆ ಶೋಧನೆಗೆ ತೆರಳಿದ ಸಂದರ್ಭದಲ್ಲಿ ಆತನ ಜೊತೆಗಿದ್ದ ಮತ್ತೊಬ್ಬ ನೈಜೀರಿಯಾ ಮೂಲದ ವ್ಯಕ್ತಿ ಮನೆಯಲ್ಲಿದ್ದ ಇನ್ನಿತರ ಎಂ.ಡಿ.ಎಂ.ಎ ಮಾದಕ ವಸ್ತುವನ್ನು ಶೌಚಾಲಯಕ್ಕೆ ಎಸೆದು ಅಲ್ಲಿಂದ ಪರಾರಿಯಾಗಿರುತ್ತಾನೆ. ಆತನ ಪತ್ತೆ ಕಾರ್ಯ ಮುಂದುವರಿದಿದೆ.
ಬೆಂಗಳೂರು ನಗರದ ದಕ್ಷಿಣ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಶ್ರೀ.ಪಿ.ಕೃಷ್ಣಕಾಂತ್,
ಮತ್ತು ವಿ.ವಿ.ಪುರಂ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀ.ಜಿ.ನಾಗರಾಜ ರವರ
ಮಾರ್ಗದರ್ಶನದಲ್ಲಿ ವಿ.ವಿ.ಪುರಂ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಶ್ರೀ.ಮಿರ್ಜಾ ಅಲಿ
ರಜಾ ರವರ ನೇತೃತ್ವದ ಸಿಬ್ಬಂದಿಯವರ ತಂಡ ಆರೋಪಿಯನ್ನು ದಸ್ತಗಿರಿ ಮಾಡುವಲ್ಲಿ
ಯಶಸ್ವಿಯಾಗಿರುತ್ತಾರೆ.
ಈ ಉತ್ತಮ ಕಾರ್ಯವನ್ನು ಬೆಂಗಳೂರು ನಗರದ ಪೊಲೀಸ್ ಆಯುಕ್ತರಾದ ಶ್ರೀ. ಬಿ.ದಯಾನಂದ ರವರು ಮತ್ತು ಪಶ್ಚಿಮ ವಿಭಾಗದ ಅಪರ ಪೊಲೀಸ್ ಆಯುಕ್ತರಾದ ಶ್ರೀ. ಎನ್.ಸತೀಶ್‌ಕುಮಾರ್ ರವರು ಶ್ಲಾಘಿಸಿರುತ್ತಾರೆ.