ವಿ.ವಿ ಪುರಂ ಪೊಲೀಸ್ ಠಾಣಾ ಪೊಲೀಸರು, ಮೋಜು ಮತ್ತು ಮಸ್ತಿಗಾಗಿ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ತಮಿಳುನಾಡು ಮೂಲದ ಇಬ್ಬರು ಆರೋಪಿಗಳನ್ನು ದಸ್ತಗಿರಿ ಮಾಡಿ ಅವರ ವಶದಿಂದ ಸುಮಾರು 12 ಲಕ್ಷ ಮೌಲ್ಯದ ವಿವಿಧ ಕಂಪನಿಯ 16 ದ್ವಿಚಕ್ರ ವಾಹನಗಳನ್ನು ಅಮಾನತ್ತು ಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.
ಬೆಂಗಳೂರು ನಗರದ ದಕ್ಷಿಣ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಶ್ರೀ.ಪಿ.ಕೃಷ್ಣಕಾಂತ್, ಮತ್ತು ವಿ ವಿ ಪುರಂ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀ.ಬಿ.ನಾಗರಾಜ ರವರ ಮಾರ್ಗದರ್ಶನದಲ್ಲಿ ವಿವಿ ಪುರಂ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಶ್ರೀ.ಮಿರ್ಚಾ, ಆಲಿ ರವರ ನೇತೃತ್ವದಲ್ಲಿ ಸಿಬ್ಬಂದಿಯವರ ಜೊತೆಗೂಡಿ ಆರೋಪಿಗಳನ್ನು ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿರುತ್ತಾರೆ.
ಈ ಉತ್ತಮ ಕಾರ್ಯವನ್ನು ಬೆಂಗಳೂರು ನಗರದ ಪೊಲೀಸ್ ಆಯುಕ್ತರಾದ ಶ್ರೀ. ಬಿ.ದಯಾನಂದ ರವರು ಮತ್ತು ಪಶ್ಚಿಮ ವಿಭಾಗದ ಅಪರ ಪೊಲೀಸ್… ಆಯುಕ್ತರಾದ ಶ್ರೀ. ಎನ್.ಸತೀಶ್ಕುಮಾರ್ ರವರು ಶ್ಲಾಘಿಸಿರುತ್ತಾರೆ.
ವರದಿ : ಆಂಟೋನಿ ಬೇಗೂರು