ತಲಘಟ್ಟಪುರ ಪೊಲೀಸ್ ಠಾಣೆಯ ಸರಹದ್ದಿನ ಮನೆಯೊಂದರಲ್ಲಿ, ದಿನಾಂಕ:27/07/223 ರಂದು ಯಾರೋ ಕಳ್ಳರು ತಮ್ಮ ಮನೆಯಲ್ಲಿದ್ದ ಚಿನ್ನದ ಒಡವೆಗಳು ಮತ್ತು ಬೆಳ್ಳಿ ವಸ್ತುಗಳನ್ನು ಕಳ್ಳತನ
ಮಾಡಿಕೊಂಡು ಹೋಗಿರುತ್ತಾರೆ.
ಎಂದು ಫಿರ್ಯಾದುದಾರರು ಕೊಟ್ಟ ದೂರಿನ ಮೇರೆಗೆ, ಪ್ರಕರಣ
ದಾಖಲಾಗಿರುತ್ತದೆ.
ಪ್ರಕರಣದ ತನಿಖೆಯನ್ನು ಕೈಗೊಂಡು ಕಾರ್ಯಪ್ರವೃತ್ತರಾದ ತಲಘಟ್ಟಪುರ ಪೊಲೀಸ್ ಠಾಣೆಯ ಪೊಲೀಸರು, ದಿನಾಂಕ:02/08/2023 ರಂದು ಒಬ್ಬ ಆಸಾಮಿಯನ್ನು ದೊಡ್ಡ ನಾಗಮಂಗಲ, ಎಲೆಕ್ಟ್ರಾನಿಕ್ ಸಿಟಿ: ಫೇಸ್-2, ಬೆಂಗಳೂರಿನಲ್ಲಿ ದಸ್ತಗಿರಿ ಮಾಡಿ ಆತನನ್ನು ವಿಚಾರಣೆಗೊಳಪಡಿಸಿದಾಗ ಆರೋಪಿಯು ಎಂ.ಓ.ಬಿ ಆಸಾಮಿಯಾಗಿದ್ದು, ಆತನು ಬನ್ನೇರುಘಟ್ಟ, ತಲಘಟ್ಟಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ತಲಾ ಒಂದು ಹೋಂಡ ಡಿಯೋ ದ್ವಿ ಚಕ್ರ ವಾಹನ, ಮತ್ತು ಒಂದು ಮನೆ ಕಳವು ಮಾಡಿದ್ದ ಪ್ರಕರಣ ಪತ್ತೆಯಾಗಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ 15 ಗ್ರಾಂ ತೂಕದ ಚಿನ್ನದ ಒಡವೆಗಳು, ಹಾಗು ಸುಮಾರು 1 ಗ್ರಾಂ ತೂಕದ ಬೆಳ್ಳಿ ಸಾಮಾನುಗಳು, ಹಾಗು ಆರೋಪಿಯು ಕೃತ್ಯಕ್ಕೆ ಬಳಸಿದ್ದ ವಾಹನವನ್ನು ಸೇರಿದಂತೆ ಮತ್ತೆರೆಡು ಪ್ರಕರಣಗಳಿಗೆ ಸಂಬಂಧಿಸಿದಂತೆ ಎರಡು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿರುತ್ತದೆ. ಈ ಮೂರು ದ್ವಿ ಚಕ್ರ ವಾಹನಗಳ ಒಟ್ಟು ಮೌಲ್ಯ ಸುಮಾರು 2 ಲಕ್ಷ ರೂ ಗಳಾಗಿರುತ್ತದೆ.
ಆರೋಪಿಯು ರೂಢಿಗತ ಅಪರಾಧಿಯಗಿದ್ದು ಜೀವನ ಮಾಡಲು ಈ ರೀತಿ ನಿರಂತರವಾಗಿ ಅಪರಾಧ ಕೃತ್ಯಗಳಲ್ಲಿ ತೊಡಗಿರುವುದು ವಿಚಾರಣೆಯಿಂದ ತಿಳಿದು ಬಂದಿರುತ್ತದೆ. ಆರೋಪಿಯ ವಿರುದ್ಧ ಈ ಹಿಂದೆ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ಒಂದು ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ಎರಡು,
ಪ್ರಕರಣ ದಾಖಲಾಗಿರುತ್ತವೆ.
ಬೆಂಗಳೂರು ದಕ್ಷಿಣ ವಿಭಾಗದ ಮಾನ್ಯ ಉಪ ಪೊಲೀಸ್ ಕಮೀಷನರ್ ಶ್ರೀ ಪಿ ಕೃಷ್ಣಕಾಂತ್ ರವರ ಮಾರ್ಗದರ್ಶನದಲ್ಲಿ, ಸುಬ್ರಮಣ್ಯಪುರ ಉಪ-ವಿಭಾಗದ ಸಹಾಯಕ ಪೊಲೀಸ್ ಕಮೀಷನರ್ ಶ್ರೀ ಪವನ್ ಎನ್ ರವರ ನೇತೃತ್ವದಲ್ಲಿ, ತಲಘಟ್ಟಪುರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಶ್ರೀ ಜಗದೀಶ್, ಎನ್. ಹಾಗು ಸಿಬ್ಬಂದಿಯವರುಗಳು ಆರೋಪಿಯನ್ನು ಪತ್ತೆ ಮಾಡಿ ಮಾಲುಗಳನ್ನು
ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.
ಈ ಉತ್ತಮ ಕಾರ್ಯವನ್ನು ಬೆಂಗಳೂರು ನಗರದ ಹಿರಿಯ ಅಧಿಕಾರಿಗಳು ಶ್ಲಾಘಿಸಿರುತ್ತಾರೆ.
ವರದಿ : ಆಂಟೋನಿ ಬೇಗೂರು