ಜನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯ 23 ನೇ ಮುಖ್ಯರಸ್ತೆಯಲ್ಲಿ ಫಿರ್ಯಾದುದಾರರು ತಮ್ಮ ಮನೆಯ ಸಮೀಪ ನಡೆದುಕೊಂಡು ಹೋಗುತ್ತಿದ್ದಾಗ ದ್ವಿಚಕ್ರ ವಾಹನದಲ್ಲಿ ಬಂದ ಒಬ್ಬ ಅಪರಿಚಿತ ವ್ಯಕ್ತಿಯು ಏಕಾಏಕಿ ಫಿರ್ಯಾದುದಾರರ ಕತ್ತಿನಲ್ಲಿದ್ದ ಚಿನ್ನದ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾಗಿರುತ್ತಾರೆಂದು ನೀಡಿದ ದೂರಿನ ಮೇರೆಗೆ, ಸರಗಳ್ಳತನ ಪ್ರಕರಣ ದಾಖಲಿಸಿಕೊಂಡ ಬನಶಂಕರಿ ಪೊಲೀಸರು ತನಿಖೆಯನ್ನು ಕೈಗೊಂಡು ಒಬ್ಬ ಆರೋಪಿಯನ್ನು ದಸ್ತಗಿರಿ ಮಾಡಿ, ಆತನು ನೀಡಿದ ಮಾಹಿತಿ ಮೇರೆಗೆ, ರೂ.9,40,000/- ಮೌಲ್ಯದ ಒಟ್ಟು 150 ಗ್ರಾಂ ತೂಕದ 04
ಚಿನ್ನದ ಸರಗಳು ಹಾಗೂ ಕೃತ್ಯಕ್ಕೆ ಬಳಸಿದ 01 ದ್ವಿಚಕ್ತ ವಾಹನವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ. ಸದರಿ ಪ್ರಕರಣದ ಆರೋಪಿಯು ಈ ಹಿಂದೆ ಬೆಂಗಳೂರು ನಗರದಲ್ಲಿ ಕಳೆದ 17 ವರ್ಷಗಳಿಂದ ಸರಗಳ್ಳತನ ಮಾಡುವ ಆರೋಪಿಯಾಗಿದ್ದು ಈತನ ವಿರುದ್ಧ ಬೆಂಗಳೂರು ನಗರದ ಜ್ಞಾನಭಾರತಿ, ಕೆಂಗೇರಿ, ತಲಘಟ್ಟಪುರ, ಅನ್ನಪೂರ್ಣೇಶ್ವರಿನಗರ, ಬಾಗಲುಗುಂಟೆ, ಜೆ.ಜೆ.ನಗರ, ಶೇಷಾದ್ರಿಪುರಂ, ಹೊಸಪೇಟೆ ಎಕ್ಸ್‌ಟೆಂಕ್ಷನ್ ಪೊಲೀಸ್ ಠಾಣೆಗಳ ಹಾಗೂ ಇನ್ನೂ ಇತರ ಪೊಲೀಸ್ ಠಾಣೆಗಳಲ್ಲಿ ಸುಮಾರು 40 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿರುತ್ತವೆ. ಆರೋಪಿಯು ಈ ಹಿಂದೆ ಭಾಗಿಯಾದ ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದು, ನಂತರ ಆರೋಪಿಯನ್ನು ಮತ್ತೆ ದಸ್ತಗಿರಿ ಮಾಡಲಾಗಿರುತ್ತದೆ.
ಆರೋಪಿಯ ದಸ್ತಗಿರಿಯಿಂದ ಸದು ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದು ಪ್ರಕರಣ, ಚಂದ್ರಾಲೇಔಟ್, ಸಂಜಯನಗರ, ತುಮಕೂರು ಜಿಲ್ಲೆ ನ್ಯೂ ಎಕ್ಸ್‌ಟೆಂಕ್ಷನ್ ಪೊಲೀಸ್ ಠಾಣೆಗಳ ತಲಾ ಒಂದೊಂದು ಪ್ರಕರಣ ಹಾಗೂ ನೆಲಮಂಗಲ ಪೊಲೀಸ್ ಠಾಣೆಗೆ ಸಂಬಂಧಿಸಿದ ಒಂದು ದ್ವಿಚಕ್ರ ವಾಹನ ಕಳುವು ಪ್ರಕರಣ ಪತ್ತೆಯಾಗಿರುತ್ತದೆ.
ಬೆಂಗಳೂರು ನಗರ, ದಕ್ಷಿಣ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಶ್ರೀ.ಪಿ.ಕೃಷ್ಣಕಾಂತ್, ಮತ್ತು ಜಯನಗರ, ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀ.ಕೆ.ವಿ.ಶ್ರೀನಿವಾಸ್ ರವರ ಮಾರ್ಗದರ್ಶನದಲ್ಲಿ ಬನಶಂಕರಿ ಪೊಲೀಸ್ ರಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಶ್ರೀ.ಗಿರೀಶ್ ನಾಯ್ಕ.ಸಿ ರವರ ನೇತೃತ್ವದ ಸಿಬ್ಬಂದಿಯವರ ತಂಡ ಆರೋಪಿಯನ್ನು ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿರುತ್ತಾರೆ.
ಈ ಉತ್ತಮ ಕಾರ್ಯವನ್ನು ಬೆಂಗಳೂರು ನಗರದ ಪೊಲೀಸ್ ಆಯುಕ್ತರಾದ ಶ್ರೀ. ಬಿ.ದಯಾನಂದ ರವರು ಮತ್ತು ಪಶ್ಚಿಮ ವಿಭಾಗದ ಆಪರ ಪೊಲೀಸ್ ಆಯುಕ್ತರಾದ ಶ್ರೀ. ಎನ್.ಸತೀಶ್ ಕುಮಾರ್ ರವರು ಶ್ಲಾಘಿಸಿರುತ್ತಾರೆ.