ದಿಃ-09-09-2023 ರಂದು ರಾಷ್ಟ್ರೀಯ ಲೋಕ ಅದಾಲತ್ ಆಯೋಜನೆ ಮಾಡಿದ್ದು ಇದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಬಾಕಿ ಇರುವ (NI Act, traffic Challan cases, Compoundable cases) ಪ್ರಕರಣಗಳಿಗೆ ಸಂಬಂಧಿಸಿದಂತೆ ರಾಜಿ ಮಾಡುವುದರ ಮೂಲಕ ಪ್ರಕರಣ ಇತ್ಯರ್ಥ ಪಡಿಸಿ ಲೋಕಾ ಅದಾಲತ್ ಯಶಸ್ವಿಗೊಳಿಸಲು ಪೂರ್ವಭಾವಿಯಾಗಿ ಚರ್ಚಿಸಲು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕೊಠಡಿಯಲ್ಲಿ ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಮತ್ತು ಅಧ್ಯಕ್ಷರು ಜಿ.ಕಾ.ಸೇ.ಪ್ರಾ ರವರ ಅಧ್ಯಕ್ಷತೆಯಲ್ಲಿ ಸಭೆಯನ್ನು ಹಮ್ಮಿಕೊಂಡಿದ್ದು. ಸಭೆಯಲ್ಲಿ ಮಾನ್ಯ ನ್ಯಾಯಾಧೀಶರುಗಳು, ಮಾನ್ಯ ಜಿಲ್ಲಾ ಪೊಲೀಸ್ ವರಿಷ್ಥಾಧಿಕಾರಿಗಳು, ಅಪರ ಪೊಲೀಸ್ ಅಧೀಕ್ಷಕರು, ಜಿಲ್ಲೆಯ ಎಲ್ಲಾ ಡಿವೈಎಸ್.ಪಿ ರವರುಗಳು, ಸಿಪಿಐ/ಪಿಐ ರವರು ಭಾಗವಹಿಸಿದ್ದರು.