ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಿನಾಂಕ: 26.02.2018 ರಂದು ಮನೆಯ ಪಕ್ಕ ಆಟ ಆಡುತ್ತಿದ್ದ 03 ವರ್ಷದ ಹೆಣ್ಣು ಮಗುವನ್ನು ಆರೋಪಿಯು ಎತ್ತುಕೊಂಡು ಹೋಗಿ, ಅತ್ಯಾಚಾರ ಮಾಡಿ, ಆಕೆಯ ಮೇಲೆ ಸೈಜು ಗಲ್ಲನ್ನು ಎತ್ತಿ ಹಾಕಿ ಕೊಲೆ ಮಾಡಿ, ಪೋಕ್ಟೋ ಕಾಯ್ದೆಯಡಿಯಲ್ಲಿ ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ತನಿಖೆಯನ್ನು ಕೈಗೊಂಡ ಕೊತ್ತನೂರು ಪೊಲೀಸರು ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದು, ಸದರಿ ಪ್ರಕರಣದ ವಿಚಾರಣೆ ನಡೆಸಿದ ಮಾನ್ಯ ಎಫ್.ಟಿ.ಎಸ್.ಸಿ 4 ನ್ಯಾಯಾಲಯವು ಆರೋಪಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಿರುತ್ತದೆ.
ಈ ಉತ್ತಮ ಕಾರ್ಯವನ್ನು ಇಲಾಖೆಯ ಹಿರಿಯ ಅಧಿಕಾರಿಗಳು ಪ್ರಶಂಸಿರುತ್ತಾರೆ.