ಆರ್.ಎಂ.ಸಿ.ಯಾರ್ಡ್ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ರವರು ದಿನಾಂಕ 23-08-2023 ರಂದು ಸಂಜೆ ಠಾಣಾ ಸರಹದ್ದಿನಲ್ಲಿ ಗಸ್ತಿನಲ್ಲಿರುವಾಗ ಭಾತ್ಮೀದಾರರಿಂದ ಬಂದ ಖಚಿತ ಮಾಹಿತಿ ಮೇರೆಗೆ, ಲಾರಿ ಸ್ಟ್ಯಾಂಡ್ ಬಳಿ ಬರುತ್ತಿದ್ದ ಆಟೋ ರಿಕ್ಷಾವನ್ನು ತಡೆದು ಪರಿಶೀಲಿಸಲಾಗಿ, ಅದರಲ್ಲಿ 10 ಚಾಕೋಲೆಟ್ ತುಂಬಿದ ಬಿಳಿ ಚೀಲಗಳಿದ್ದು, ಅದರಲ್ಲಿದ್ದ ಆಸಾಮಿಯನ್ನು ವಿಚಾರಿಸಿದಾಗ ಆತನು ಗಾಂಜಾ ಮಿಶ್ರಿತ ಚಾಕೋಲೇಟ್ ಮಾರಾಟ ಮಾಡಲು ತೆಗೆದುಕೊಂಡು ಹೋಗುತ್ತಿರುವುದಾಗಿ ತನ್ನೊಪ್ಪಿಕೊಂಡ ಮೇರೆಗೆ ಆತನನ್ನು ಮಾಲು ಸಮೇತ ವರಕ್ಕೆ ಪಡೆದು ಠಾಣೆಗೆ ಕರೆ ತಂದು ಸದರಿ ಆರೋಪಿಯ ವಿರುದ್ಧ ಆರ್.ಎಂ.ಸಿ.ಯಾರ್ಡ್ ಪೊಲೀಸ್ ಠಾಣೆಯಲ್ಲಿ ಎನ್.ಡಿ.ಪಿ.ಎಸ್ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಈ ಪ್ರಕರಣದಲ್ಲಿ ಒಬ್ಬ ಆರೋಪಿಯನ್ನು ದಸ್ತಗಿರಿ ಮಾಡಿ, ಆತನ ವರದಿಂದ 300 ಕೆ.ಜಿ, ಗಾಂಜಾ
ಮತ್ತು 1 ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದೆ.
ಈ ಪ್ರಕರಣದಲ್ಲಿನ ಆರೋಪಿಯನ್ನು ಹೆಚ್ಚಿನ ತನಿಖೆಗೊಳಪಡಿಸಿದಾಗ, ಆರೋಪಿಯು ಉತ್ತರ ಪ್ರದೇಶದ ಖಾನಪೂರದಲ್ಲಿನ ವ್ಯಕ್ತಿಯೊಬ್ಬರಿಂದ ಟ್ರಾನ್ಸ್‌ಪೋರ್ಟ್ ಮೂಲಕ ಚಾಕೋಲೇಟ್ ರೂಪದಲ್ಲಿ ಗಾಂಜಾ ಮಿಶ್ರಿತ ಚಾಕೋಲೇಟ್‌ಗಳನ್ನು ತರಿಸಿಕೊಂಡು ಬೆಂಗಳೂರು ನಗರದಲ್ಲಿ ಮಾರಾಟ ಮಾಡುತ್ತಿದ್ದಾಗಿ ತಿಳಿಸಿರುತ್ತಾನೆ. ಈ ಪ್ರಕರಣದಲ್ಲಿ ಇನ್ನು ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ.
ಈ ಪ್ರಕರಣದಲ್ಲಿ ಶ್ರೀ ಶಿವ ಪ್ರಕಾಶ್ ದೇವರಾಜು ಐ.ಪಿ.ಎಸ್, ಉಪ ಪೊಲೀಸ್ ಆಯುಕ್ತರು, ಉತ್ತರ ವಿಭಾಗ ರವರ ಮಾರ್ಗದರ್ಶನದಲ್ಲಿ ಶ್ರೀ ಸದಾನಂದ ಎ ತಿಪ್ಪಣ್ಣವರ್, ಎಸಿಪಿ, ಪೀಣ್ಯ ಉಪ ವಿಭಾಗ ಮತ್ತು ಶ್ರೀ ಸುರೇಶ್.ಪಿ ಪೊಲೀಸ್ ಇನ್ಸಪೆಕ್ಟರ್, ಆರ್.ಎಂ.ಸಿ.ಯಾರ್ಡ್ ಪೊಲೀಸ್ ಠಾಣೆ ರವರ ನೇತೃತ್ವದಲ್ಲಿ
ಸಿಬ್ಬ೦ದಿಯವರುಗಳು ತಂಡ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.
ಈ ಉತ್ತಮ ಕಾರ್ಯವನ್ನು ಬೆಂಗಳೂರು ನಗರದ ಪೊಲೀಸ್ ಆಯುಕ್ತರಾದ ಶ್ರೀ. ಬಿ.ದಯಾನಂದ ರವರು ಮತ್ತು ಪಶ್ಚಿಮ ವಿಭಾಗದ ಅಪರ ಪೊಲೀಸ್ ಆಯುಕ್ತರಾದ ಶ್ರೀ. ಎನ್.ಸತೀಶ್ ಕುಮಾರ್ ರವರು ಶ್ಲಾಘಿಸಿರುತ್ತಾರೆ.