ನಂದಿನಿಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಲಗ್ಗೆರೆಯ ಚೌಡೇಶ್ವರಿನಗರದಲ್ಲಿ ನಿಲ್ಲಿಸಿದ್ದ ಸುಜುಕಿ ಆಕ್ಸೆಸ್ ದ್ವಿಚಕ್ರವಾಹನವು ಕಳುವಾಗಿರುತ್ತದೆಂದು, ಪಿರಾದಿಯು ನೀಡಿದ ದೂರಿನ ಮೇರೆಗೆ, ನಂದಿನಿಲೇಔಟ್ ಪೊಲೀಸ್ ಠಾಣೆಯಲ್ಲಿ ದ್ವಿಚಕ್ರವಾಹನ ಕಳವು ಪ್ರಕರಣ ದಾಖಲಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಒಬ್ಬ ಆರೋಪಿಯನ್ನು ದಸ್ತಗಿರಿ ಮಾಡಿ, ಆತನು ನೀಡಿದ ಮಾಹಿತಿ ಮೇರೆಗೆ ಸುಮಾರು 3 ಲಕ್ಷ ರೂ. ಬೆಲೆ ಬಾಳುವ 7 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.
ಈ ಪ್ರಕರಣದಲ್ಲಿ ಆರೋಪಿಯನ್ನು ಹೆಚ್ಚಿನ ವಿಚಾರಣೆಗೊಳಪಡಿಸಿದಾಗ, ಆರೋಪಿಯು ಹಳೆಯ
ಎಂ.ಓ.ಆಸಾಮಿಯಾಗಿದ್ದು, ಈ ಹಿಂದೆ ಬೇಗೂರು, ಜಿಗಣಿ, ನೆಲಮಂಗಲ ಟೌನ್, ರಾಜಗೋಪಾಲನಗರ
ಪೊಲೀಸ್ ಠಾಣೆಗಳಲ್ಲಿ ದ್ವಿಚಕ್ರವಾಹನ ಕಳವು ಪ್ರಕರಣಗಳಲ್ಲಿ ಜೈಲಿಗೆ ಹೋಗಿ ಬಂದಿರುತ್ತಾನೆ.
ಆರೋಪಿಯ ಬಂಧನದಿಂದ ನಂದಿನಿ ಲೇಔಟ್ ಕೊತ್ತನೂರು, HSR layout,ಅನ್ನಪೂರ್ಣೇಶ್ವರಿನಗರ, ಬಾಗಲಗುಂಟೆ, ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆ ಸೇರಿದಂತೆ ಒಟ್ಟು 7 ದ್ವಿಚಕ್ರವಾಹನ ಕಳವು ಪ್ರಕರಣಗಳು ಪತ್ತೆಯಾಗಿರುತ್ತವೆ.
ಬೆಂಗಳೂರು ನಗರ, ಉತ್ತರ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಶ್ರೀ ಶಿವ ಪ್ರಕಾಶ್ ದೇವರಾಜು, ಐ.ಪಿ.ಎಸ್., ರವರ ಮಾರ್ಗದರ್ಶನದಲ್ಲಿ, ಶ್ರೀ ಹೆಚ್. ಕೃಷ್ಣಮೂರ್ತಿ, ಎಸಿಪಿ ಮಲ್ಲೇಶ್ವರಂ ಉಪ ವಿಭಾಗ ಮತ್ತು ಶ್ರೀ ಲಕ್ಷ್ಮಣ್ ಜೆ. ಪೊಲೀಸ್ ಇನ್ಸಪೆಕ್ಟರ್, ನಂದಿನಿಲೇಔಟ್ ಪೊಲೀಸ್ ಠಾಣೆ ರವರ ನೇತೃತ್ವದ ತಂಡ ಆರೋಪಿಯನ್ನು ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿರುತ್ತಾರೆ.
ಈ ಉತ್ತಮ ಕಾರ್ಯವನ್ನು ಇಲಾಖೆಯ ಹಿರಿಯ ಅಧಿಕಾರಿಗಳು ಶ್ಲಾಘಿಸಿರುತ್ತಾರೆ.