ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ಮಲ್ಲಸಂದ್ರದ ರಸ್ತೆ ಬಳಿ ದಿನಾಂಕ 06-09-2023 ರಂದು ಮಧ್ಯಾಹ್ನದ ವೇಳೆಯಲ್ಲಿ ಸಾರ್ವಜನಿಕರಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದಾರೆಂದು, ಭಾತ್ಮೀದಾರರಿಂದ ಬಂದ ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ಹೋಗಿ, ಆರೋಪಿಯನ್ನು ವಶಕ್ಕೆ ಪಡೆದುಕೊಂಡು ಪರಿಶೀಲಿಸಲಾಗಿ ಆತನ ಬಳಿ ಎಂ.ಡಿ.ಎಂ.ಎ ಪತ್ತೆಯಾಗಿದ್ದು, ಮಾರಾಟ ಮಾಡಲು ತಂದಿರುವುದಾಗಿ ತಿಳಿಸಿದ ಮೇರೆಗೆ ಆತನನ್ನು ಮಾಲು ಸಮೇತ ವಶಕ್ಕೆ ಪಡೆದು ಠಾಣೆಗೆ ಕರೆ ತಂದು ಸದರಿ ಆರೋಪಿಯ ವಿರುದ್ಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಎನ್.ಡಿ.ಪಿ.ಎಸ್ ಮತ್ತು ವಿದೇಶಿ
ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಈ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ದಸ್ತಗಿರಿ ಮಾಡಿ, ಆರೋಪಿಗಳ ವಶದಿಂದ 21 ಗ್ರಾಂ ತೂಕದ ಎಂ.ಡಿ. ಎಂ. ಎ 2 ಸಾವಿರ ನಗದು ಹಣ, ಕೃತ್ಯಕ್ಕೆ ಬಳಸಿದ -ದ್ವಿಚಕ್ರವಾಹನವನ್ನು ವಶಪಡಿಸಿಕೊಳ್ಳಲಾಗಿದೆ.
ಈ ಪ್ರಕರಣದಲ್ಲಿನ ಆರೋಪಿಗಳನ್ನು ಹೆಚ್ಚಿನ ತನಿಖೆಗೊಳಪಡಿಸಿದಾಗ, ಒಬ್ಬ ಆರೋಪಿಯು ದಕ್ಷಿಣ ಆಫ್ರಿಕಾ ಮತ್ತೊಬ್ಬ ನೈಜಿರೀಯಾ ದೇಶದವನಾಗಿದ್ದು, ಇಬ್ಬರು ಬಟ್ಟೆ ವ್ಯಾಪಾರದ ವೀಸಾದಲ್ಲಿ ಭಾರತಕ್ಕೆ ಬಂದಿದ್ದು, ಇಂತಹ ಕೃತ್ಯಗಳಲ್ಲಿ ತೊಡಗಿರುತ್ತಾರೆ. ಈ ಪ್ರಕರಣದಲ್ಲಿ ಇನ್ನು ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ.
ಈ ಪ್ರಕರಣದ ಪತ್ತೆ ಕಾರ್ಯವನ್ನು ಉತ್ತರ ವಿಭಾಗ ಉಪ ಪೊಲೀಸ್ ಆಯುಕ್ತರಾದ ಶ್ರೀ. ಶಿವ
ಪ್ರಕಾಶ್ ದೇವರಾಜು ಐ.ಪಿ.ಎಸ್. ರವರ ಮಾರ್ಗದರ್ಶನದಲ್ಲಿ ಶ್ರೀ. ಸದಾನಂದ – ತಿಪಣ್ಣವರ್, ಸಹಾಯಕ
ಪೊಲೀಸ್ ಆಯುಕ್ತರು ಪೀಣ್ಯ, ಉಪ ವಿಭಾಗ ರವರ ನೇತೃತ್ವದಲ್ಲಿ, ಬಾಗಲಗುಂಟೆ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಶ್ರೀ. ಹನುಮಂತರಾಜು.ಎಂ ಮತ್ತು ಸಿಬ್ಬಂದಿಯವರುಗಳು ಆರೋಪಿಗಳನ್ನು ದಸ್ತಗಿರಿ
ಮಾಡುವಲ್ಲಿ ಯಶಸ್ವಿಯಾಗಿರುತ್ತಾರೆ.