ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ರವೀಂದನಗರ, ಟಿ. ದಾಸರಹಳ್ಳಿಯ ಮನೆಯೊಂದರಲ್ಲಿ ದಿನಾಂಕ 05/09/2023 ರಂದು ಒಬ್ಬ ಮಹಿಳೆ ಮತ್ತು ಆತನ ಮಗ ಕೊಲೆಯಾಗಿರುವ ಸಂಬಂಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿರುತ್ತದೆ.
ಈ ಪ್ರಕರಣದ ಕೃತ್ಯ ನಡೆದ ಸ್ಥಳ ಪರಿಶೀಲನೆ ನಡೆಸಿದ ಹಿರಿಯ ಪೊಲೀಸ್ ಅಧಿಕಾರಿಗಳು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಆರೋಪಿ ಪತ್ತೆಗೆ ವಿಶೇಷ ತಂಡ ರಚಿಸಿದ್ದು, ಸದರಿ ತಂಡವು ತನಿಖೆ ಕೈಗೊಂಡು ಕೃತ್ಯದಲ್ಲಿ ಭಾಗಿಯಾಗಿರುವ ಒಬ್ಬ ಆರೋಪಿತ ಅಸಾಮಿಯನ್ನು ದಸ್ತಗಿರಿ ಮಾಡಿ, ಹೆಚ್ಚಿನ ವಿಚಾರಣೆಗೊಳಪಡಿಸಿದಾಗ, ಆರೋಪಿಯು ಮೃತಳೊಂದಿಗೆ ಕೆಲವು ವರ್ಷಗಳಿಂದ ಅಕ್ರಮ ಸಂಬಂಧ ಹೊಂದಿದ್ದು, ಮೃತಳು ಇತ್ತೀಚೆಗೆ ಆಕೆಯ ಮನೆಯ ಸಮೀಪದಲ್ಲಿರುವ ಮತ್ತೊಬ್ಬ ವ್ಯಕ್ತಿಯ ಜೊತೆ ಓಡಾಡುತ್ತಿರುವುದನ್ನು ಗಮನಿಸಿದ ಆರೋಪಿಯು ಕೋಪಗೊಂಡು ಈ ಕೃತ್ಯವೆಸಗಿರುವುದಾಗಿ ತಿಳಿದು ಬಂದಿರುತ್ತದೆ. ಈ ಕೃತ್ಯವೆಸಗಿರುವುದನ್ನು ಮೃತಳ 11 ವರ್ಷದ ಮಗ ನೋಡಿದ್ದು. ಈ ವಿಚಾರವನ್ನು ಬೇರೆಯವರಿಗೆ ತಿಳಿಸುತ್ತಾನೆಂದು ಆತನನ್ನು ಸಹ ಕೊಲೆ ಮಾಡಿರುವುದಾಗಿ ತನಿಖೆಯಿಂದ ತಿಳಿದು ಬ೦ದಿರುತ್ತದೆ.
ಈ ಪ್ರಕರಣದ ಪತ್ತೆ ಕಾರ್ಯವನ್ನು ಉತ್ತರ ವಿಭಾಗ ಉಪ ಪೊಲೀಸ್ ಆಯುಕ್ತರಾದ ಶ್ರೀ. ಶಿವ ಪ್ರಕಾಶ್ ದೇವರಾಜು ಐ.ಪಿ.ಎಸ್. ರವರ ಮಾರ್ಗದರ್ಶನದಲ್ಲಿ ಶ್ರೀ ಸದಾನಂದ ಎ ತಿಪಣ್ಣವರ್, ಸಹಾಯಕ ಪೊಲೀಸ್ ಆಯುಕ್ತರು ಪೀಣ್ಯ ಉಪ ವಿಭಾಗ ರವರ ನೇತೃತ್ವದಲ್ಲಿ, ಬಾಗಲಗುಂಟೆ ಪೊಲೀಸ್ ಠಾಣೆಯ ಪೊಲೀಸ್ ಇನ್‌ಪೆಕರ್ ಶ್ರೀ, ಹನುಮಂತರಾಜು.ಎಂ ಮತ್ತು ಸಿಬ್ಬಂದಿಯವರುಗಳು ಆರೋಪಿಯನ್ನು ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿರುತ್ತಾರೆ.
ಈ ಉತ್ತಮ ಕಾರ್ಯವನ್ನು ಬೆಂಗಳೂರು ನಗರದ ಪೊಲೀಸ್ ಆಯುಕ್ತರಾದ ಶ್ರೀ. ಬಿ.ದಯಾನಂದ ರವರು
ಮತ್ತು ಪಶ್ಚಿಮ ವಿಭಾಗದ ಅಪರ ಪೊಲೀಸ್ ಆಯುಕ್ತರಾದ ಶ್ರೀ. ಎನ್.ಸತೀಶ್ ಕುಮಾರ್ ರವರು
ಶ್ಲಾಘಿಸಿರುತ್ತಾರೆ.