ಬೆಂಗಳೂರು ನಗರದ ಪಶ್ಚಿಮ ವಿಭಾಗದ ಗೋವಿಂದರಾಜನಗರ ಪೊಲೀಸ್ ಠಾಣೆಯಲ್ಲಿ ವರದಿಯಾಗಿದ್ದ ಮನೆ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಆರೋಪಿಯನ್ನು ದಸ್ತಗಿರಿ ಮಾಡಿದ್ದು, ಸದರಿ ಆರೋಪಿಯ ಮಾಹಿತಿ ಮೇರೆಗೆ ಸುಮಾರು 2,50,000/- ರೂ ಬೆಲೆ ಬಾಳುವ ಸುಮಾರು 45 ಗ್ರಾಂ ತೂಕದ ಚಿನ್ನದ ಆಭರಣಗಳು ಮತ್ತು ಕೃತ್ಯಕ್ಕೆ ಉಪಯೋಗಿಸಿದ್ದ ಒಂದು ವಿಚಿತ್ರ ವಾಹನವನ್ನು ಅಮಾನತ್ತು ಪಡಿಸಿಕೊಳ್ಳಲಾಗಿದೆ.
ಈ ಕಾರ್ಯಾಚರಣೆಯನ್ನು ಗೋವಿಂದರಾಜನಗರ ಪೊಲೀಸ್ ಠಾಣೆಯ ಒಂದು ಮನೆ ಕಳವು ಪ್ರಕರಣ ಮತ್ತು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಿ ಒಂದು ಗಮನ ಬೇರೆಡೆ ಸೆಳೆದು ಕಳ್ಳತನ ಮಾಡಿದ ಒಂದು ಪ್ರಕರಣ ಸೇರಿದಂತೆ ಒಟ್ಟು 2 ಪ್ರಕರಣಗಳು ಪತ್ತೆಯಾಗಿರುತ್ತವೆ.
ಈ ಕಾರ್ಯವನ್ನು ಡಿಸಿಪಿ, ಪಶ್ಚಿಮ ವಿಭಾಗ ಮತ್ತು ಇಲಾಖೆಯ ಹಿರಿಯ ಅಧಿಕಾರಿಗಳು ಪ್ರಶಂಶಿರುತ್ತಾರೆ.