ಚಂದ್ರಲೇಔಟ್ ಪೊಲೀಸ್ ಠಾಣೆಯ ಸರಹದ್ದಿಗೆ ಸೇರಿದ ಐಟಿಐ ಲೇಔಟ್, ನಾಯಂಡಹಳ್ಳಿಯ ಮನೆಯ ಬಳಿ ನಗದು ಹಣ ರೂ 94,00,000/-ಲಕ್ಷ ಕಳುವಾಗಿರುವುದಾಗಿ ಪಿರ್ಯಾದುದಾರರು ನೀಡಿದ ದೂರಿನ ಮೇರೆಗೆ ಚಂದ್ರಲೇಔಟ್ ಪೊಲೀಸ್ ಠಾಣೆಯಲ್ಲಿ ಕಳವು ಪ್ರಕರಣ ದಾಖಲಿಸಿಕೊಂಡು, ಕಾರ್ಯಪ್ರವೃತ್ತರಾದ ಚಂದ್ರಲೇಔಟ್ ಪೊಲೀಸರು ದಿನಾಂಕ: 12-09-2023 ರಂದು ಒಬ್ಬ ಆರೋಪಿಯನ್ನು ದಸ್ತಗಿರಿ ಮಾಡಿ, ಆರೋಪಿಯು ನೀಡಿದ ಮಾಹಿತಿ ಮೇರೆಗೆ ಆರೋಪಿಯಿಂದ ಕಳವು ಮಾಡಿದ್ದ. ರೂ.93,95,000/ ನಗದು ಹಣವನ್ನು ಅಮಾನತ್ತುಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.
ಈ ಕಾರ್ಯಚರಣೆಯನ್ನು ಬೆಂಗಳೂರು ನಗರದ ಪಶ್ಚಿಮ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಶ್ರೀ. ಎಸ್. ಗಿರೀಶ್, ಐ.ಪಿ.ಎಸ್. ಇವರ ಸೂಕ್ತ ಮಾರ್ಗದರ್ಶನದಲ್ಲಿ, ಕೆಂಗೇರಿಗೇಟ್ ಉಪವಿಭಾಗದ ಸಹಾಯಕ ಪೊಲೀಸ್ ಕಮೀಷನರ್ ರವರಾದ ಶ್ರೀ.ಭರತ್.ಎಸ್.ರೆಡ್ಡಿ ರವರ ನಿರ್ದೇಶನದಲ್ಲಿ ಚಂದ್ರಾಲೇಔಟ್ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಶ್ರೀ. ಕೆ.ಎಸ್.ಹಟ್ಟಿ ಹಾಗೂ ಉಸ್ತುವಾರಿ ಪೊಲೀಸ್ ಇನ್ಸ್ಪೆಕ್ಟರ್ ಶ್ರೀ.ಕೆಂಪೇಗೌಡ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆಯನ್ನು ಕೈಗೊಂಡು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.
ಈ ಮೇಲ್ಕಂಡ ಅಧಿಕಾರಿಗಳ ಮತ್ತು ಸಿಬ್ಬಂದಿಯವರುಗಳ ಕರ್ತವ್ಯವನ್ನು ಬೆಂಗಳೂರು ನಗರದ ಪೊಲೀಸ್ ಆಯುಕ್ತರಾದ ಶ್ರೀ.ಬಿ.ದಯಾನಂದ ಮತ್ತು ಅಪರ ಪೊಲೀಸ್ ಆಯುಕ್ತರು ಪಶ್ಚಿಮ ಶ್ರೀ.ಎನ್,ಸತೀಶ್ ಕುಮಾರ್ ರವರು ಪ್ರಶಂಸಿರುತ್ತಾರೆ.