ದಿನಾಂಕ: 20-09-2023 ರಂದು ಶ್ರೀ ಲಕ್ಷ್ಮೀ ವೆಂಕಟೇಶ್ವರ ಅಸೋಸಿಯೇಷನ್ ಕ್ಲಬ್ನಲ್ಲಿ, ಕ್ಲಬ್ನ ಅಧ್ಯಕ್ಷರು, ಕಾರ್ಯದರ್ಶಿ, ಖಜಾಂಚಿ ಮತ್ತು ಇತರರು ಅಕ್ರಮವಾಗಿ ಜೂಜಾಟ ಆಡುವ ಪಂಟರ್ಗಳನ್ನು ಸೇರಿಸಿಕೊಂಡು ಹಣವನ್ನು ಪಣವಾಗಿ ಕಟ್ಟಿಕೊಂಡು ಇಸ್ಪೀಟ್ ಎಲೆಗಳಿಂದ ಆಕ್ರಮವಾಗಿ ಜೂಜಾಟ ಆಡುತ್ತಿದ್ದಾರೆಂದು ಬಾತ್ಮೀದಾರರಿಂದ ಬಂದ ಖಚಿತ ಮಾಹಿತಿ ಮೇರೆಗೆ, ಬ್ಯಾಟರಾಯನಪುರ ಪೊಲೀಸರು ದಾಳಿ ನಡೆಸಿ 52 ಜನ ಜೂಜುಕೋರರು ಮತ್ತು ಅವರುಗಳು ಜೂಜಾಟಕ್ಕೆ ಪಣವಾಗಿಟ್ಟಿದ್ದ ರೂ.1,65,790/- ನಗದು ಹಣ ಹಾಗೂ ಅವರ ವಶದಲ್ಲಿದ್ದ ಇಸ್ಪೀಟ್ ಎಲೆಗಳನ್ನು ವಶಕ್ಕೆ ಪಡೆದು ಕಾನೂನು ಕ್ರಮ ಜರುಗಿಸಿರುತ್ತೆ.
ಈ ಕಾರ್ಯಾಚರಣೆಯನ್ನು ಪಶ್ಚಿಮ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಶ್ರೀ. ಎಸ್.ಗಿರೀಶ್, ಮತ್ತು ಬ್ಯಾಟರಾಯನಪುರ ಉಪ-ವಿಭಾಗದ ಎ.ಸಿ.ಪಿ. ಶ್ರೀ.ಭರತ್ ರೆಡ್ಡಿ ರವರ ಮಾರ್ಗದರ್ಶನದಲ್ಲಿ, ಬ್ಯಾಟರಾಯನಪುರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಶ್ರೀ ನಿಂಗನಗೌಡ ಎ. ಪಾಟೀಲ್ ರವರ ನೇತೃತ್ವದ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ತಂಡ ಈ ಮೇಲ್ಕಂಡ ಕಾರ್ಯಚರಣೆಯನ್ನು ಯಶಸ್ವಿಗೊಳಿಸಿರುತ್ತಾರೆ.
ಈ ಉತ್ತಮ ಕಾರ್ಯವನ್ನು ಇಲಾಖೆಯ ಹಿರಿಯ ಪೊಲೀಸ್ ಅಧಿಕಾರಿಗಳು ಶ್ಲಾಘಿಸಿರುತ್ತಾರೆ.