ಅಕ್ರಮ ಗಾಂಜಾ ಸಾಗಾಣಿಕೆ: ಆರೋಪಿಗಳ ಬಂಧನ

ಬೀದರ್:11 ರಂದು ಆಂದ್ರ ಪ್ರದೇಶದಿಂದ ಭಾಲ್ಕಿ ಮಾರ್ಗವಾಗಿ ಸೋಲಾಪೂರಕ್ಕೆ ಕಾರಿನಲ್ಲಿ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಮೂರು ಜನ ಆರೋಪಿಗಳನ್ನು ಬೀದರ-ನಾಂದೇಡ ರಾಷ್ಟಿçÃಯ ಹೆದ್ದಾರಿ 50ರ ಹಾಲಹಿಪ್ಪರ್ಗಾ ಕ್ರಾಸ್ ಬಳಿ ಬಂಧಿಸಿ ಅವರಿಂದ 25,65,000 ರೂ ಮೌಲ್ಯದ 25.65 ಕೆಜಿ ಗಾಂಜಾ ಹಾಗೂ 3 ಲಕ್ಷ ಮೌಲ್ಯದ ಟಾಟಾ ಇಂಡಿಕಾ ವಿಸ್ಟಾ ಕಾರು ವಶಕ್ಕೆ ಪಡೆಯಲಾಗಿದೆ ಎಂದು ಬೀದರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ7 ಚನ್ನಬಸವಣ್ಣ ಎಸ್.ಎಲ್ ಹೇಳಿದರು.
ಅವರು ಗುರುವಾರ ಬೀದರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಛೇರಿ ಆವರಣದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಆರೋಪಿಗಳನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದಾಗ ಇವರು ಬೀದರನ ಗುನ್ನಳ್ಳಿ ರಸ್ತೆ ಬಳಿಯ ರಿಕ್ಷಾ ಕಾಲೋನಿಯ ಮನೆಯೊಂದರಲ್ಲಿ ಗಾಂಜಾ ಶೇಖರಣೆ ಮಾಡಿ ಇಟ್ಟಿರುವುದಾಗಿ ತಿಳಿದು ಬಂದ ಹಿನ್ನೆಲೆಯಲ್ಲಿ ಅಲ್ಲಿಗೆ ಭೇಟಿ ನೀಡಿ ಶೋಧನೆ ಮಾಡಿದಾಗ ಅಲ್ಲಿಯೂ ಸಹ ಶೇಖರಣೆ ಮಾಡಿಟ್ಟಿರುವ 21,40,000 ರೂ ಮೌಲ್ಯದ 21.44 ಕೆಜಿ ಗಾಂಜಾ ಪತ್ತೆಯಾಗಿದೆ ಹಾಗೂ ಇದೇ ಸಂದರ್ಭದಲ್ಲಿ ಈ ಗಾಂಜಾವನ್ನು ಕಾವಲು ಕಾಯುತ್ತಿದ್ದ ಓರ್ವ ಆರೋಪಿಯನ್ನು ಸಹ ಬಂಧಿಸಲಾಗಿದೆ.

ಈ ಪ್ರಕರಣದಲ್ಲಿ ಒಟ್ಟು 47,05,000ರೂ ಮೌಲ್ಯದ 47.09 ಕೆಜಿ ಗಾಂಜಾ ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ಖಾನಾಪೂರ ಗ್ರಾಮದಲ್ಲಿ ಈ ಹಿಂದೆ ನಡೆದ ಮೂರು ದ್ವಿಚಕ್ರ ವಾಹನಗಳ ಮತ್ತು ಒಂದು ಮನೆ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದರು ಎಂದು ಆರೋಪಿಗಳು ವಿಚಾರಣೆ ವೇಳೆಯಲ್ಲಿ ತಿಳಿಸಿದ್ದಾರೆ. ಈ ಗಾಂಜಾ ಮಾರಾಟ ಕೃತ್ಯದಲ್ಲಿ ಭಾಗಿಯಾಗಿದ್ದ ಇನ್ನು ಮೂರು ಜನ ಆರೋಪಿಗಳು ತಲೆ ಮರಿಸಿಕೊಂಡಿದ್ದು ಅವರಿಗಾಗಿಯೂ ಶೋಧ ಕಾರ್ಯ ನಡೆದಿದೆ ಎಂದು ಮಾಹಿತಿ ನೀಡಿದರು.

ಇತ್ತಿಚೇಗೆ ಬೀದರ ಜಿಲ್ಲೆಯಲ್ಲಿ ಕ್ರಿಕೇಟ್ ಬೆಟ್ಟಿಂಗ್‌ನಲ್ಲಿ ಭಾಗಿಯಾಗಿದ್ದ ಮೂರು ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆನ್‌ಲೈನ್ ಮೂಲಕ ಕ್ರಿಕೇಟ್ ಬೆಟ್ಟಿಂಗ್ ನಡೆಯುತ್ತಿದೆ ಎಂಬ ಮಾಹಿತಿ ಇದೆ ಆದರಿಂದ ಪೊಷಕರು ತಮ್ಮ ಮಕ್ಕಳ ಬ್ಯಾಂಕ್ ಖಾತೆಯ ಹಣ ವರ್ಗಾವಣೆಯ ಮೇಲೆ ನಿಗಾವಹಿಸಬೇಕು. ಜಿಲ್ಲೆಯ ನಾಗರಿಕರು ಹಾಗೂ ಯುವಕರು ಕ್ರಿಕೇಟ್ ಬೆಟ್ಟಿಂಗ್‌ನಲ್ಲಿ ಭಾಗಿಯಾಗಬಾರದು. ಇಂತಹ ಕೃತ್ಯದಲ್ಲಿ ಭಾಗಿಯಾದಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು.
ಜಿಲ್ಲೆಯಲ್ಲಿ ಮನೆ ಕಳ್ಳತನ ಪ್ರಕರಣಗಳನ್ನು ನಿಯಂತ್ರಿಸಲು ಜಿಲ್ಲೆಯ ಸಾರ್ವಜನಿಕರು ಸಹಕರಿಸಬೇಕು. ತಮ್ಮ ಮನೆಗಳಿಗೆ ಸಿಸಿಟಿವಿ ಅಳವಡಿಸಬೇಕು. ತಾವು ಊರಿಗೆ ತೆರಳುವಾಗ ತಮ್ಮ ಮನೆಯ ಅಕ್ಕಪಕ್ಕದ ಮನೆಯವರಿಗೆ ಮಾಹಿತಿ ನೀಡಿ ತಮ್ಮ ಮನೆಯ ಮೇಲೆ ನಿಗಾ ಇಡುವಂತೆ ಹೇಳಬೇಕು. ಹೆಚ್ಚಿನ ದಿನಕ್ಕಾಗಿ ಊರಿಗೆ ತೆರಳುವಂತಿದ್ದರೆ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು. ತಮ್ಮ ಬಡಾವಣೆಯಲ್ಲಿ ಅಪರಿಚಿತ ವ್ಯಕ್ತಿಗಳು ಸಂಚರಿಸುದನ್ನು ಕಂಡುಬAದರೆ ಪೊಲೀಸ್ ಠಾಣೆಗೆ ಮಾಹಿತಿ ನೀಡಿ ಎಂದು ಹೇಳಿದರು.
ಈ ಸಂದರ್ಭದಲ್ಲಿ ಭಾಲ್ಕಿ ಪೊಲೀಸ್ ಉಪಾಧೀಕ್ಷಕ ಶಿವಾನಂದ ಪವಾಡಶೇಟ್ಟಿ, ಭಾಲ್ಕಿ ಗ್ರಾಮೀಣ ವೃತ್ತ ಸಿಪಿಐ ಗುರುಪಾದ ಎಸ್ ಬಿರಾದಾರ, ಪಿಎಸ್‌ಐ ವಿಶ್ವರಾಧ್ಯ ಸೇರಿದಂತೆ ಈ ಕಾರ್ಯಚರಣೆಯಲ್ಲಿ ಭಾಗಿಯಾಗಿದ್ದ ಪೊಲೀಸ್ ಇಲಾಖೆಯ ಸಿಬ್ಬಂಧಿಗಳು ಉಪಸ್ಥಿತರಿದ್ದರು.

ವರದಿ :- ಸಿದ್ದಪ್ಪ ಪಟ್ಟೇದಾರ್

Leave a Reply

Your email address will not be published. Required fields are marked *