ಹಗಲು & ರಾತ್ರಿ ಕನ್ನಾ ಕಳವು ಮಾಡಿದ್ದ ಆಸಾಮಿಯ ಬಂಧನ : ಬಾಗಲಗುಂಟೆ ಪೊಲೀಸರ ಕಾರ್ಯಾಚರಣೆ

ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ಭೈರವೇಶ್ವರನಗರದ ಪಿರಾದುದಾರರು ದಿನಾಂಕ 0710/2023 ರಿಂದ ದಿನಾಂಕ 08/10/2023 ರ ನಡುವೆ ಮಗಳ ಮದವೆಯ ಆಮಂತ್ರಣ ಪತ್ರ ನೀಡಲು ಊರಿಗೆ ಹೋಗಿದ್ದು, ಆ ಸಮಯದಲ್ಲಿ ಯಾರೋ ಕಳ್ಳರು ತಮ್ಮ ಮನೆಯ ಬಾಗಿಲಿನ ಬೀಗ ಮುರಿದು, ಚಿನ್ನಾಭರಣ ಮತ್ತು ಬೆಳ್ಳಿ ವಸ್ತುಗಳನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆಂದು ನೀಡಿದ ದೂರಿನ ಮೇರೆಗೆ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಹಗಲು & ರಾತ್ರಿ ಕನ್ನಾ ಕಳವು ಪ್ರಕರಣ ದಾಖಲಾಗಿರುತ್ತದೆ. ಈ ಪ್ರಕರಣದ ಪತ್ತೆ ಕಾರ್ಯಕೈಗೊಂಡ ಪೊಲೀಸರು ಒಬ್ಬ ವ್ಯಕ್ತಿಯನ್ನು ವಶಕ್ಕೆ ಪಡೆದು, ಆತನು ನೀಡಿದ ಮಾಹಿತಿ ಮೇರೆಗೆ ಸುಮಾರು 2,71 ಲಕ್ಷ ರೂ. ಮೌಲ್ಯದ 10 ಗ್ರಾಂ ತೂಕದ ಚಿನ್ನಾಭರಣ ಮತ್ತು 113 ಗ್ರಾಂ ಬೆಳ್ಳಿ ವಸ್ತುಗಳನ್ನು, 54 ಸಾವಿರ ರೂ. ನಗದು ಹಣ ಹಾಗೂ ಕೃತ್ಯಕ್ಕೆ ಬಳಸಿದ 1-ಕಬ್ಬಿಣದ ರಾಡನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.

ಈ ಪ್ರಕರಣದಲ್ಲಿ ವ್ಯಕ್ತಿಯನ್ನು ಹೆಚ್ಚಿನ ಎಚಾರಣೆಗೊಳಪಡಿಸಲಾಗಿ, ಈ ವ್ಯಕ್ತಿಯು ಹಳೆಯ ಎಂ.ಓ. ಆಸಾಮಿಯಾಗಿದ್ದು, ಈತನು ಈ ಹಿಂದೆ ಬಾಗಲಗುಂಟೆ ಪೊಲೀಸ್ ಠಾಣೆ, ಸೋಲದೇವನಹಳ್ಳಿ ಪೊಲೀಸ್ ಠಾಣೆ, ಪೀಣ್ಯ ಪೊಲೀಸ್ ಠಾಣೆ, ಯಶವಂತವರ ಪೊಲೀಸ್ ಠಾಣೆ ಹಾಗೂ ಬ್ಯಾಟರಾಯನಪುರ ಪೊಲೀಸ್ ಠಾಣೆಗಳ ಕನ್ನಾ ಕಳವು ಪ್ರಕರಣಗಳಲ್ಲಿ ಭಾಗಿಯಾಗಿ ಜೈಲಿಗೆ ಹೋಗಿ ಬಂದಿರುತ್ತಾನೆ. ಈತನು ಸಂಜೆ ವೇಳೆಯಲ್ಲಿ ಬೀಗ ಹಾಕಿರುವ ಮನೆಗಳನ್ನು ಗುರುತಿಸಿಕೊಂಡು ಹೋಗಿ, ರಾತ್ರಿ ಬಂದು ಕಳವು ಮಾಡಿರುವುದಾಗಿ ತಿಳಿದು ಬಂದಿರುತ್ತದೆ.

ಈ ಪ್ರಕರಣದ ಪತ್ತೆ ಕಾರ್ಯವನ್ನು ಉತ್ತರ ವಿಭಾಗ ಉಪ ಪೊಲೀಸ್ ಆಯುಕ್ತರಾದ ಶ್ರೀ. ಸೈಮುಲು ಆಡಾವತ್ ರವರ ಮಾರ್ಗದರ್ಶನದಲ್ಲಿ ಶಿ. ಸದಾನಂದ ಎ ತಿಪ್ಪಣ್ಣವರ, ಸಹಾಯಕ ಪೊಲೀಸ್ ಆಯುಕ್ತರು ಪೀಣ್ಯ ಉಪ ವಿಭಾಗ ರವರ ನೇತೃತ್ವದಲ್ಲಿ, ಬಾಗಲಗುಂಟೆ ಪೊಲೀಸ್ ಠಾಣೆಯ ಪೊಲೀಸ್ ಇನ್ಸಪೆಕ್ಟರ್ ಶ್ರೀ.ಹನುಮಂತರಾಜು.ಎಂ. ಮತ್ತು ಸಿಬ್ಬಂದಿಯವರುಗಳು ಆರೋಪಿಯನ್ನು ದಸ್ತಗಿರಿ ಮಾಡಿ, ಚಿನ್ನಾಭರಣ ಮತ್ತು ಬೆಳ್ಳಿ ವಸ್ತುಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.

Leave a Reply

Your email address will not be published. Required fields are marked *