ಡ್ರಗ್‌ಪೆಕ್ಟರ್‌ಗಳನ್ನು ಒಳಗೊಂಡಂತೆ ಒಟ್ಟು 10 ಜನರ ಬಂಧನ : ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ ಸಿಬ್ಬಂದಿಗಳ ಕ್ಷಿಪ್ರ ಕಾರ್ಯಾಚರಣೆ

ಬೆಂಗಳೂರು ನಗರ ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡವು ಡ್ರಗ್ ಪೆಡ್ಲೆರ್ ಗಳ ವಿರುದ್ಧ ಕಾರ್ಯಾಚರಣೆಯನ್ನು ಮುಂದುವರೆಸಿದ್ದು, ಕಳೆದ 15 ದಿನಗಳಲ್ಲಿ ಕಾಡುಗೋಡಿ, ಕೆ.ಆರ್.ಪುರ, ಸೋಲದೇವನಹಳ್ಳಿ, ಹೆಚ್.ಎಸ್.ಆರ್ ಲೇಔಟ್, ವೈಟ್ ಫೀಲ್ಡ್, ಬಾಣಸವಾಡಿ, ಪರಪ್ಪನ ಅಗ್ರಹಾರ ಪೊಲೀಸ್‌ ಠಾಣಾ ವ್ಯಾಪ್ತಿಗಳಲ್ಲಿ ಕ್ಷಿಪ್ತ ಕಾರ್ಯಾಚರಣೆಯನ್ನು ನಡೆಸಿ ದಾಖಲು ಮಾಡಿರುವ 7 ಪ್ರಕರಣಗಳಲ್ಲಿ 8 ಜನ ವಿದೇಶಿ ಪ್ರಜೆಗಳು ಸೇರಿದಂತೆ ಒಟ್ಟು 10 ಜನ ಡ್ರಗ್‌ ಪೆಡ್ಲರ್‌ಗಳನ್ನು ಬಂಧಿಸಿದ್ದು, ಇವರುಗಳ ವಶದಿಂದ ಅಂದಾಜು 5,04,30,000/-ರೂ ಮೌಲ್ಯದ ನಿಷೇಧಿತ ಮಾದಕ ವಸ್ತುಗಳಾದ ಎಂ.ಡಿ.ಎಂ.ಎ ಕ್ರಿಸ್ಟಲ್ 3.806 ಕೆಜಿ, ಕೊಕೇನ್-50 ಗ್ರಾಂ, ಎಕ್ಸ್‌ಟಿಸಿ, ಪಿಲ್ಸ್-25, ಎಲ್.ಎಸ್‌ಡಿ ಸ್ಟ್ರಿಪ್ಸ್ -50, ಗಾಂಜಾ 5.100 ಫೋನ್‌ಗಳು-9 ಇತ್ಯಾದಿ ವಸ್ತುಗಳನ್ನು ಕೆಜಿ, ಕಾರ್-1, ಬೈಕ್-3, ಮೊಬೈಲ್ ಫೋನ್‌ಗಳು-9 ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.

ಮೇಲ್ಕಂಡ ಪ್ರಕರಣಗಳಲ್ಲಿ ಬಂಧಿತ ಆರೋಪಿಗಳು ಕಡಿಮೆ ಸಮಯದಲ್ಲಿ ಹೆಚ್ಚಿನ ಹಣ ಸಂಪಾದನೆ ಮಾಡುವ ಉದ್ದೇಶದಿಂದ ಕಡಿಮೆ ಬೆಲೆಗೆ ನಿಷೇಧಿತ ಮಾದಕ ವಸ್ತುಗಳನ್ನು ಖರೀದಿ ಮಾಡಿ ಅವುಗಳನ್ನು ಪರಿಚಯಸ್ಥ ಗಿರಾಕಿಗಳಿಗೆ, ಕಾಲೇಜು ವಿದ್ಯಾರ್ಥಿಗಳಿಗೆ, ಐಟಿ/ಬಿಟಿ ಉದ್ಯೋಗಿಗಳಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಅಕ್ರಮ ಹಣ ಸಂಪಾದನೆಯಲ್ಲಿ ತೊಡಗಿರುತ್ತಾರೆ. ಬಂಧಿತ ಆರೋಪಿಗಳ ವಿರುದ್ಧ ಕಾಡುಗೋಡಿ, ಕೆ.ಆರ್.ಪುರ, ಸೋಲದೇವನಹಳ್ಳಿ, ಹೆಚ್.ಎಸ್.ಆರ್ ಲೇಔಟ್, ವೈಟ್ ಫೀಲ್ಡ್ , ಬಾಣಸವಾಡಿ, ಪರಪ್ಪನ ಅಗ್ರಹಾರ ಪೊಲೀಸ್‌ ಠಾಣೆಗಳಲ್ಲಿ ಎನ್.ಡಿ.ಪಿ.ಎಸ್ ಕಾಯ್ದೆ-1985 ರೀತ್ಯಾ ಪ್ರಕರಣಗಳು ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ಈ ಕಾರ್ಯಾಚರಣೆಯನ್ನು ಅಪರ ಪೊಲೀಸ್ ಆಯುಕ್ತರು, ಪಶ್ಚಿಮ ಹಾಗೂ ಉಪ ಪೊಲೀಸ್ ಪೊಲೀಸ್ ಆಯುಕ್ತರು, ಅಪರಾಧ-2 ರವರ ಮಾರ್ಗದರ್ಶನದಲ್ಲಿ ಸಿಸಿಬಿಯ ಮಾದಕ ದವ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡವು ಯಶಸ್ವಿಯಾಗಿ ಕೈಗೊಂಡಿರುತ್ತಾರೆ.

Leave a Reply

Your email address will not be published. Required fields are marked *