ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ವತಿಯಿಂದ ರೌಡಿಗಳ ಪರೇಡ್ ನಡೆಸಿ ಕಾನೂನು ಬಾಹಿರ ಚಟುವಟಿಕೆ ನಡೆಸದಂತೆ ಬೆಂಗಳೂರು ನಗರದ ತಿಲಕ್ ನಗರ ಪೊಲೀಸ್ ಇನ್ಸ್ ಪೆಕ್ಟರ್ ಶ್ರೀ.ಎಂ .ಎಲ್. ಗಿರೀಶ್ ರವರಿಂದ ಖಡಕ್ ಎಚ್ಚರಿಕೆ ನೀಡಲಾಗಿದೆ .
ರೌಡಿಗಳ ಪರೇಡ್ ನಲ್ಲಿ ಕೊಲೆ \’ಸುಲಿಗೆ ಅತ್ಯಾಚಾರ, ದರೋಡೆ ಪ್ರಕರಣಗಳಲ್ಲಿ ಭಾಗಿಯಾದ ಸುಮಾರು 40 ಜನ ರೌಡಿ ಶೀಟರ್ ಗಳ ಪರೇಡ್ ನಡೆಸಲಾಯಿತು .\” ಈ ಹಿಂದೆ ಎಸಗಿದ್ದ ಅಪರಾಧಕ್ಕೆ ಸಂಬಂಧಿಸಿದಂತೆ ಕೆಲವರು ಶಿಕ್ಷೆ ಎದುರಿಸುತ್ತಿದ್ದಾರೆ, ಕೆಲವರು ವಿರುದ್ಧ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ .ಹಿಂದೆ ಮಾಡಿದ ತಪ್ಪು ಮರುಕಳಿಸಬಾರದು ,ಯಾವುದೇ ರೀತಿಯ ಅಹಿತಕರ ಘಟನೆ ನಡೆಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಲಕ್ ನಗರ ಪೋಲಿಸ್ ಠಾಣೆ ಇನ್ಸ್ ಪೆಕ್ಟರ್ ರಾಧಾ ಶ್ರೀ.ಎಂ .ಎಲ್. ಗಿರೀಶ್ ಅವರು ಎಚ್ಚರಿಕೆ ನೀಡಿದರು .
ಶ್ರೀ .ಎಂ ಎಲ್ ಗಿರೀಶ್ ಅವರು ರಾಜ್ಯ ಪೊಲೀಸ್ ಇಲಾಖೆಯಲ್ಲಿ ಆಧ್ಯಾತ್ಮ ಸೇವೆಗಾಗಿ 2017/2018 ನೇ ಸಾಲಿನ ಮುಖ್ಯಮಂತ್ರಿ ಪದಕ ವಿಜೇತರಾಗಿದ್ದರು .
ನೂತನ ಇನ್ಸ್ ಪೆಕ್ಟರ್ ಆಗಿ ಚಾರ್ಜ್ ತೆಗೆದುಕೊಂಡಿದ್ದಾರೆ. ನೂತನ ಅಧಿಕಾರಿ ಬಂದು 1ವಾರದ ಒಳಗೆಯೇ ಇವರು ಜನತೆಯ ಮನ ಗೆದ್ದಿದ್ದಾರೆ.
ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,