ದ್ವಿಚಕ್ರವಾಹನ ಕಳವು ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳ ಬಂಧನ

23-10-2023 ರಂದು ರಾತ್ರಿ ಸಮಯದಲ್ಲಿ ರಾಜರಾಜೇಶ್ವರಿನಗರ ಐಡಿಯಲ್ ಹೋಮ್ಸ್ನ ಮುಂಭಾಗ ನಿಲ್ಲಿಸಿದ್ದ ಒಂದು ದ್ವಿಚಕ್ರ ವಾಹನವನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿದ್ದ ಬಗ್ಗೆ ರಾಜರಾಜೇಶ್ವರಿನಗರ ಪೊಲೀಸ್‌ ಠಾಣೆಯಲ್ಲಿ ಕಳವು ಪ್ರಕರಣ ದಾಖಲಿಸಿದ್ದು.
ಸದರಿ ಪ್ರಕರಣದ ತನಿಖೆಯನ್ನು ಮುಂದುವರೆಸಿ, ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ಮಾಡಲಾಗಿ, ಆರೋಪಿಗಳಿಂದ ಈ 3,00,000/- ಬೆಲೆ ಬಾಳುವ ಐದು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿರುತ್ತದೆ. ರಾಜರಾಜೇಶ್ವರಿನಗರ ಪೊಲೀಸ್ ಠಾಣೆಯ ಒಂದು ಪ್ರಕರಣ, ಬ್ಯಾಟರಾಯನಪುರ ಪೊಲೀಸ್ ಠಾಣೆಯ ಒಂದು ಪ್ರಕರಣ, ಸಿದ್ದಾಪುರ ಪೊಲೀಸ್ ಠಾಣೆಯ ಒಂದು ಪ್ರಕರಣ, ಮಾಗಡಿರಸ್ತೆ ಪೊಲೀಸ್ ಠಾಣೆಯ ಒಂದು ಪ್ರಕರಣ ಮತ್ತು ಕೋಣನಕುಂಟೆ ಪೊಲೀಸ್ ಠಾಣೆಯ ಒಂದು ಪ್ರಕರಣ ಸೇರಿದಂತೆ ಒಟ್ಟು ಐದು ಪ್ರಕರಣ ಪತ್ತೆಯಾಗಿರುತ್ತದೆ.
ಸದರಿ ಕಾರ್ಯಾಚರಣೆಯನ್ನು ಪಶ್ಚಿಮ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಶ್ರೀ. ಎಸ್ ಗಿರೀಶ್‌, ಐಪಿಎಸ್, ಹಾಗೂ ಬ್ಯಾಟರಾಯನಪುರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀ.ಭರತ್.ಎಸ್.ರೆಡ್ಡಿ ರವರ ಮಾರ್ಗದರ್ಶನದಲ್ಲಿ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಶ್ರೀ. ಶಿವಕುಮಾರ್ ಬಿ ಎಂ ರವರ ನೇತೃತ್ವದಲ್ಲಿ ಅಧಿಕಾರಿ ಮತ್ತು ಸಿಬ್ಬಂದಿ ರವರುಗಳು ಪ್ರಕರಣಗಳನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿರುತ್ತಾರೆ.

Leave a Reply

Your email address will not be published. Required fields are marked *