ವಿದ್ಯಾರಣ್ಯಪುರ ಪೊಲೀಸ್ ಠಾಣಾ ಸರಹದ್ದಿನಲ್ಲಿರುವ ಸಿಂಗಾಪುರದಲ್ಲಿ ದಿನಾಂಕ:14.11.2023 ರಂದು ಮನೆ ಕಳ್ಳತನವಾಗಿರುವ ಬಗ್ಗೆ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಮನೆ ಕಳ್ಳತನ ಪ್ರಕರಣ ದಾಖಲಾಗಿರುತ್ತದೆ.
ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ದಿನಾಂಕ:30.11.2023 ರಂದು ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆದು, ಅವರಿಂದ ಸುಮಾರು ₹ 25 ಲಕ್ಷ ರೂ ಬೆಲೆ ಬಾಳುವ 366 ಗ್ರಾಂ ಚಿನ್ನಾಭರಣ ಹಾಗೂ * 3.5 ಲಕ್ಷ ಮೌಲ್ಯದ 4 ದ್ವಿಚಕ್ರ ವಾಹನಗಳು ಸೇರಿದಂತೆ ಒಟ್ಟು * 28.5 ಲಕ್ಷ ಮೌಲ್ಯದ ಮಾಲನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.
ಆರೋಪಿತರ ಬಂಧನದಿಂದ ವಿದ್ಯಾರಣ್ಯಪುರ ಪೊಲೀಸ್ ಠಾಣೆಯ 01- ಪಕರಣ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯ 01- ಪ್ರಕರಣ ಹೆಬ್ಬಗೋಡಿ ಪೊಲೀಸ್ ಠಾಣೆಯ 01- ಪಕರಣ, ಅವಲಹಳ್ಳಿ ಪೊಲೀಸ್ ಠಾಣೆಯ 01- ಪ್ರಕರಣ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯ 01- ಪ್ರಕರಣ ಹಾಗೂ ಮೈಸೂರಿನ ಕುವೆಂಪುನಗರ ಪೊಲೀಸ್ ಠಾಣೆಯ 01- ಪ್ರಕರಣ ಒಟ್ಟು 06 ಪ್ರಕರಣಗಳು ಪತ್ತೆಯಾಗಿದ್ದು, ಪ್ರಕಣಗಳಿಗೆ ಸಂಬಂಧಿಸಿದ ವ್ಯಕ್ತಿಗಳು ಈ ಹಿಂದೆ ಬೆಂಗಳೂರು ನಗರ, ತುಮಕೂರು ಜಿಲ್ಲೆ, ಮೈಸೂರಿನ ಕುವೆಂಪು ನಗರ ಕಡೆಗಳಲ್ಲಿ ದ್ವಿ-ಚಕ್ರ ವಾಹನ ಕಳ್ಳತನ, ಮನೆಗಳ್ಳತನ ಮತ್ತು ಸುಲಿಗೆ ಪಕರಣಗಳಲ್ಲಿ ಬಾಗಿಯಾಗಿರುವು ತಿಳಿದುಬಂದಿದ್ದು, ತನಿಖೆ ಮುಂದುವರೆದಿರುತ್ತದೆ.
ಬೆಂಗಳೂರು ನಗರ, ಈಶಾನ್ಯ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಶ್ರೀ ಲಕ್ಷ್ಮೀಪ್ರಸಾದ್ ಬಿ.ಎಂ. ಐಪಿಎಸ್ ರವರ ಮಾರ್ಗದರ್ಶನದಲ್ಲಿ ಯಲಹಂಕ ಉಪ ವಿಭಾಗದ ಸಹಾಯಕ ಪೊಲಿಸ್ ಆಯುಕ್ತರಾದ ಶ್ರೀ ನರಸಿಂಹಮೂರ್ತಿ ರವರ ನೇತೃತ್ವದಲ್ಲಿ ವಿದ್ಯಾರಣ್ಯಪುರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಶ್ರೀ ಶಿವಸ್ವಾಮಿ ಸಿ.ಬಿ. ಹಾಗೂ ಸಿಬ್ಬಂದಿಯವರುಗಳ ತಂಡ ಪ್ರಕರಣವನ್ನು ಬೇದಿಸುವಲ್ಲಿ ಯಶಸ್ವಿಯಾಗಿರುತ್ತಾರೆ.