ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ನಿಷೇಧಿತ ಇ-ಸಿಗರೇಟ್ ಮಾರಾಟ ಮಾಡುತ್ತಿರುವುದಾಗಿ ದೊರೆತ ಖಚಿತ ಮಾಹಿತಿ ಮೇರೆಗೆ, ದಿನಾಂಕ: 08.12.2023 ರಂದು ಎರಡು ಗಿಫ್ಟ್ ಸೆಂಟರ್‌ಗಳ ಮೇಲೆ ದಾಳಿ ಮಾಡಿ, 04 ವ್ಯಕ್ತಿಗಳನ್ನು ವಶಕ್ಕೆ ಪಡೆದುಕೊಂಡಿರುತ್ತಾರೆ. ಅವರ ವಿರುದ್ಧ ಕೋಟ್ಟ ಮತ್ತು ಇ-ಸಿಗರೇಟ್ ನಿಷೇಧ ಕಾಯ್ದೆಯಡಿಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿರುತ್ತದೆ.
ಗಿಫ್ಟ್ ಸೆಂಟರ್‌ಗಳಲ್ಲಿ ದಾಸ್ತಾನು ಮಾಡಿಕೊಂಡಿದ್ದ ಸುಮಾರು ₹ 2,30,050 ಮೌಲ್ಯದ ಇ-ಸಿಗರೇಟ್‌ನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣದ ತನಿಖೆ ಮುಂದುವರೆಸಿ, ಸದರಿ ಗಿಫ್ಟ್ ಸೆಂಟರ್‌ಗಳಿಗೆ ಇ-ಸಿಗರೇಟ್ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಮತ್ತೊಬ್ಬ ವ್ಯಕ್ತಿಯನ್ನು ದಿನಾಂಕ:10.12.2023 ರಂದು ವಶಕ್ಕೆ ಪಡೆದುಕೊಳ್ಳಲಾಗಿದೆ. ಆತನಿಂದಲೂ ಸಹ ಸುಮಾರು ₹ 23,67,400 ಮೌಲ್ಯದ ಇ- ಸಿಗರೇಟ್ ಉತ್ಪನ್ನಗಳನ್ನು ಮತ್ತು ವಿದೇಶಿ ಸಿಗರೇಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಎರಡೂ ಪ್ರಕರಣಗಳಿಂದ ಒಟ್ಟು ಸುಮಾರು ₹ 26 ಲಕ್ಷ ಮೌಲ್ಯದ ಇ-ಸಿಗರೇಟ್ ಉತ್ಪನ್ನಗಳನ್ನು ಮತ್ತು ವಿದೇಶಿ ಸಿಗರೇಟ್‌ಗಳನ್ನು ವಶಪಡಿಸಿಕೊಳ್ಳಲಾಗಿರುತ್ತದೆ. ತನಿಖೆ ಮುಂದುವರೆದಿರುತ್ತದೆ.
ಬೆಂಗಳೂರು ನಗರ, ಈಶಾನ್ಯ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಶ್ರೀ ಲಕ್ಷ್ಮೀಪ್ರಸಾದ್ ಬಿ.ಎಂ, ಐಪಿಎಸ್ ರವರ ಮಾರ್ಗದರ್ಶನದಲ್ಲಿ, ಸಂಪಿಗೆಹಳ್ಳಿ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀ ಮುರುಗೇಂದ್ರಯ್ಯರವರ ನೇತೃತ್ವದಲ್ಲಿ, ಕೊತ್ತನೂರು ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಅಧಿಕಾರಿ ಹಾಗೂ ಸಿಬ್ಬಂದಿಯವರು ಈ ಯಶಸ್ವಿ ಕಾರ್ಯಾಚರಣೆ ನಡೆಸಿರುತ್ತಾರೆ.
ಈ ಉತ್ತಮ ಕಾರ್ಯವನ್ನು ಇಲಾಖೆಯ ಹಿರಿಯ ಪೊಲೀಸ್ ಅಧಿಕಾರಿಗಳು ಪ್ರಶಂಶಿಸಿರುತ್ತಾರೆ.