ನ್ಯಾಯಾಲಯಗಳಿಗೆ ನಕಲಿ ದಾಖಲೆಗಳನ್ನು ಸಲ್ಲಿಸಿ ಆರೋಪಿಗಳಿಗೆ ಶೂರಿಟಿ ಕೊಡುತ್ತಿದ್ದ ವ್ಯಕ್ತಿಗಳ ಬಗ್ಗೆ ಮಾಹಿತಿ ಸಂಗ್ರಹಿಸಿದ ಸಿಸಿಬಿ ಅಧಿಕಾರಿಗಳು, ನಕಲಿ ಶೂರಿಟಿ ನೀಡಲು ನಕಲಿ ದಾಖಲಾತಿಗಳನ್ನು ನ್ಯಾಯಾಲಯದಲ್ಲಿ ಸಲ್ಲಿಸುತ್ತಿದ್ದ ತಂಡವನ್ನು ವಶಕ್ಕೆ ಪಡೆಯಲಾಗಿದೆ.
ಆರೋಪಿಗಳಿಗೆ ಶೂರಿಟಿ ಕೊಡಿಸುವ ವಿಚಾರ ವಿನಿಮುಯ ಮಾಡುತ್ತಿದ್ದ ಓರ್ವ ಮಹಿಳೆಯೂ ಸೇರಿದಂತೆ ಒಟ್ಟು 9 ಜನರನ್ನು ಹಲಸೂರುಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯ ಮೈಸೂರು ಬ್ಯಾಂಕ್ ವೃತ್ತದ ಬಳಿ ವಶಕ್ಕೆ ಪಡೆಯಲಾಗಿರುತ್ತದೆ. ಅವರುಗಳ ವಶದಿಂದ 35 ನಕಲಿ ಆಧಾರ್ ಕಾರ್ಡ್‌ಗಳು ಮತ್ತು 7 ಸ್ವತ್ತಿನ ದಾಖಲಾತಿಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶ್ವಸಿಯಾಗಿರುತ್ತಾರೆ.
ಈ ಸಂಬಂಧ ಆರೋಪಿಗಳ ವಿರುದ್ದ ಹಲಸೂರುಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿದ್ದು, ಆರೋಪಿಗಳು ಈ ಹಿಂದೆಯೂ ಸಹ ಕೆಲವು ಆರೋಪಿಗಳಿಗೆ ಜಾಮೀನು ಕೊಡಿಸಲು ನಕಲಿ ದಾಖಲಾತಿಗಳನ್ನು ನ್ಯಾಯಾಲಯಗಳಿಗೆ ಸಲ್ಲಿಸಿರುವುದು ಪ್ರಾಥಮಿಕ ವಿಚಾರಣೆಯಿಂದ ತಿಳಿದುಬಂದಿರುತ್ತದೆ.
ಈ ಕಾರ್ಯಾಚರಣೆಯನ್ನು ಅಪರ ಪೊಲೀಸ್ ಆಯುಕ್ತರು, ಪಶ್ಚಿಮ ರವರಾದ ಶ್ರೀ.ಎನ್.ಸತೀಶ್ ಕುಮಾರ್, ಐಪಿಎಸ್ ಮತ್ತು ಉಪ ಪೊಲೀಸ್ ಆಯುಕ್ತರು, ಅಪರಾಧ-2 ರವರಾದ ಆರ್. ಶ್ರೀನಿವಾಸ ಗೌಡ, ಐಪಿಎಸ್ ರವರುಗಳ ಮಾರ್ಗದರ್ಶನದಲ್ಲಿ, ಬೆಂಗಳೂರು ನಗರದ ಸಿಸಿಬಿ ಸಂಘಟಿತ ಅಪರಾಧ ದಳ (ಪೂರ್ವ) ವಿಭಾಗದ ಎಸಿಪಿ ರವರ ನೇತೃತ್ವದಲ್ಲಿ ಅಧಿಕಾರಿ ಮತ್ತು ಸಿಬ್ಬಂದಿಗಳು ತಾಂತ್ರಿಕ ವಿಭಾಗದ ಸಹಕಾರದೊಂದಿಗೆ ಕ್ರಮ ಕೈಗೊಂಡು ಯಶಸ್ವಿಯಾಗಿರುತ್ತಾರೆ.