ಹೆಚ್.ಎಸ್.ಆರ್ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ಒಬ್ಬ ವ್ಯಕ್ತಿ ದಂಪತಿಗಳನ್ನು ಅಥವಾ ಹುಡುಗ ಹುಡುಗಿಯರನ್ನು ಟಾರ್ಗೆಟ್ ಮಾಡಿ ಅವರನ್ನು ಹಿಂಬಾಲಿಸಿ ಅವರ ಮನೆಗಳಿಗೆ ಹೋಗಿ, ಮಾರಕಾಸ್ತ್ರಗಳನ್ನು ತೋರಿಸಿ ಪ್ರಾಣ ಬೆದರಿಕೆ ಹಾಕಿ ಅವರಿಂದ ಹಣ, ನಗ ನಾಣ್ಯ ಇತ್ಯಾದಿಗಳನ್ನು ಸುಲಿಗೆ ಮಾಡುವುದು ಹಾಗೂ ಅನ್‌ಲೈನ್ ಮೂಲಕ ಎ.ಟಿ.ಎಂ ನಿಂದ ಹಣವನ್ನು ತನ್ನ ಅಕೌಂಟ್ ಗೆ ವರ್ಗಾವಣೆ ಮಾಡಿಸಿಕೊಳ್ಳುತ್ತಿದ್ದ. ಈ ಕುರಿತು ಪ್ರಕರಣಗಳು ದಾಖಲಾಗಿರುತ್ತದೆ.
ಪ್ರಕರಣದ ಗಂಭೀರತೆಯನ್ನು ಪರಿಗಣಿಸಿದ ಹಿರಿಯ ಅಧಿಕಾರಿಗಳು, ಹೆಚ್.ಎಸ್.ಆರ್ ಲೇಔಟ್ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ರವರ ನೇತೃತ್ವದಲ್ಲಿ ಒಂದು ವಿಶೇಷ ತಂಡವನ್ನು ರಚಿಸಲಾಗಿತ್ತು.
ಈ ವಿಶೇಷ ತಂಡವು ಕ್ಷಿಪ್ರ ಕಾರ್ಯಾಚರಣೆಯನ್ನು ನಡೆಸಿ, ಓರ್ವನನ್ನು ವಶಕ್ಕೆ ಪಡೆದುಕೊಂಡಿರುತ್ತಾರೆ. ಈ ವ್ಯಕ್ತಿ ಈ ಹಿಂದೆ ಹುಳಿಮಾವು ಪೊಲೀಸ್ ಠಾಣೆಯ-1 ರಾಬರಿ ಪ್ರಕರಣ (2007ನೇ ಇಸವಿ), ಮಡಿವಾಳ ಪೊಲೀಸ್ ಠಾಣೆಯ-1 ಸುಲಿಗೆ ಪ್ರಕರಣ ಮತ್ತು 2 ಡಕಾಯಿತಿ ಪ್ರಯತ್ನ ಪ್ರಕರಣಗಳಲ್ಲಿ (2011ನೇ ಇಸವಿ), ಭಾಗಿಯಾಗಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿರುತ್ತದೆ. ಅಲ್ಲದೆ 2023ನೇ ಸಾಲಿನಲ್ಲಿ ಹೆಚ್.ಎಸ್.ಆರ್ ಲೇಔಟ್ ಪೊಲೀಸ್ ಠಾಣೆಯ-1 ರಾಬರಿ ಮತ್ತು 01 ಸುಲಿಗೆ ಪ್ರಕರಣಗಳಲ್ಲಿ ಭಾಗಿಯಾಗಿರುತ್ತಾನೆ. ಅಲ್ಲದೆ ಬೆಳಂದೂರು ಪೊಲೀಸ್ ಠಾಣೆಯ-01 ಸುಲಿಗೆ ಪ್ರಕರಣದಲ್ಲಿ ಭಾಗಿಯಾಗಿರುತ್ತಾನೆ. ತನಿಖೆ ಮುಂದುವರೆದಿದೆ.
ಈ ಪ್ರಕರಣದ ಪತ್ತೆ ಕಾರ್ಯವನ್ನು ಆಗ್ನೆಯ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಶ್ರೀ. ಸಿ.ಕೆ.ಬಾಬಾ ರವರ ಮಾರ್ಗದರ್ಶನದಲ್ಲಿ, ಶ್ರೀ.ಲಕ್ಷ್ಮಿನಾರಾಯಣ್, ಸಹಾಯಕ ಪೊಲೀಸ್ ಆಯುಕ್ತರು, ಮಡಿವಾಳ ಉಪ ವಿಭಾಗ ರವರ ನೇತೃತ್ವದಲ್ಲಿ, ಹೆಚ್.ಎಸ್.ಆರ್ ಲೇಔಟ್ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಹಾಗೂ ಅಧಿಕಾರಿ/ಸಿಬ್ಬಂದಿರವರುಗಳು ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿರುತ್ತಾರೆ.