ದಿನಾಂಕ:30-12-2023 ರಂದು ಗೋವಿಂದಪುರ ಪೊಲೀಸ್ ಠಾಣಾ ಸರಹದ್ದಿನ ವೀರಣ್ಣಪಾಳ್ಯ, ಹಿಂದೂ ರುದ್ರ ಭೂಮಿ ಕಡೆ ಹೋಗುವ ರಸ್ತೆಯಲ್ಲಿ ಬರುವ ಸಾರ್ವಜನಿಕರನ್ನು ಮಾರಕಾಸ್ತ್ರಗಳಿಂದ ಬೆದರಿಸಿ ಅವರಿಂದ ಹಣ ಮತ್ತು ಬೆಲೆ ಬಾಳುವ ವಸ್ತುಗಳನ್ನು ದರೋಡೆ ಮಾಡಲು ಹೊಂಚು ಹಾಕುತ್ತಿದ್ದವರ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ 06 ಜನರನ್ನು ವಶಕ್ಕೆ ಪಡೆದುಕೊಂಡಿರುತ್ತಾರೆ. ವಶಕ್ಕೆ ಪಡೆದ 6 ಅರೋಪಿಗಳಿಂದ ಮಾರಕಾಸ್ತ್ರಗಳು ಮತ್ತು ಕೃತ್ಯಕ್ಕೆ ಉಪಯೋಗಿಸಿದ 03 ಬೈಕ್ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಅರೋಪಿತರ ಪೈಕಿ ಒಬ್ಬ ಆರೋಪಿಯ ವಿರುದ್ಧ 2018ನೇ ಇಸವಿಯಲ್ಲಿ ಕೆ.ಜಿ.ಹಳ್ಳಿ ಪೊಲೀಸ್ ಠಾಣೆಯಲ್ಲಿ ಒಂದು ಡಕಾಯತಿ ಪ್ರಕರಣ ದಾಖಲಾಗಿರುವುದು ತನಿಖೆಯಿಂದ ತಿಳಿದು ಬಂದಿರುತ್ತದೆ.
ಈ ದಾಳಿಯನ್ನು ಸಿ.ಸಿ.ಬಿ.ಯ ಸಂಘಟಿತ ಅಪರಾಧ ದಳ (ಪಶ್ಚಿಮ) ಅಧಿಕಾರಿ ಮತ್ತು ಸಿಬ್ಬಂದಿಗಳು ಯಶಸ್ವಿಯಾಗಿರುತ್ತಾರೆ. ಈ ಆರೋಪಿಗಳ ವಿರುದ್ಧ ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ತನಿಖೆ ಮುಂದುವರೆದಿರುತ್ತದೆ.