ಸಿಸಿಬಿಯ ಅಧಿಕಾರಿಗಳು 06ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡು, ನಾಲ್ಕು ಪ್ರಕರಣಗಳಲ್ಲಿ ವಾರೆಂಟರ್ ಮತ್ತು ಎರಡು ಪ್ರಕರಣದಲ್ಲಿ ಉದ್ವೇಷಣೆ (ಪ್ರೊಕ್ಷ್ಮಮೇಷನ್) ಹೊರಡಿಸಲಾಗಿದ್ದ ಡಿ.ಜೆ.ಹಳ್ಳಿ ಪೊಲೀಸ್ ಠಾಣೆಯ ರೌಡಿಶೀಟರ್ನನ್ನು ಪತ್ತೆಹಚ್ಚಿ, ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿರುತ್ತಾರೆ.
ವಶಕ್ಕೆ ಪಡೆಯಲಾದ ರೌಡಿಶೀಟರ್ನ ವಿರುದ್ಧ ಯಲಹಂಕ, ಆರ್.ಟಿ.ನಗರ ಮತ್ತು ಡಿ.ಜೆ.ಹಳ್ಳಿ ಪೊಲೀಸ್ ಠಾಣೆಗಳಲ್ಲಿ ಕೊಲೆಗೆ ಯತ್ನ, ದರೋಡೆ, ದರೋಡೆಗೆ ಯತ್ನ ಪ್ರಕರಣಗಳು ದಾಖಲಾಗಿದ್ದು, ಈ ಪ್ರಕರಣಗಳಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದನು. ವಶಕ್ಕೆ ಪಡೆಯಲಾದ ರೌಡಿಶೀಟರ್ನನ್ನು ಡಿ.ಜೆ.ಹಳ್ಳಿ ಪೊಲೀಸ್ ಠಾಣೆಯಲ್ಲಿ ಹಾಜರ್ಪಡಿಸಿ, ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗಿದೆ.
ಸಿ.ಸಿ.ಬಿಯ ಸಂಘಟಿತ ಅಪರಾಧ ದಳ (ಪೂರ್ವ)ದ ಅಧಿಕಾರಿ ಮತ್ತು ಸಿಬ್ಬಂದಿಗಳು ತಲೆಮರೆಸಿಕೊಂಡಿದ್ದ ರೌಡಿಶೀಟರ್ನನ್ನು ಪತ್ತೆಹಚ್ಚಿ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿರುತ್ತಾರೆ.