ಕಲ್ಯಾಣ ಮುಟಪ ದಲ್ಲಿ ಕಳುವು ಮಾಡುತ್ತಿದ್ದ ಮೌಲ್ಯದ 91 ಗ್ರಾಂ ಚಿನ್ನಾಭರಣ ಹಾಗೂ 150 ಗ್ರಾಂ ಬೆಳ್ಳಿ ವತ.

ಮಾಗಡಿ ರಸ್ತೆ ಪೊಲೀಸ್ ಠಾಣೆಯಲ್ಲಿ ವರದಿಯಾಗಿದ್ದ ಮನೆ ಕಳವು ಹಾಗೂ ಕಲ್ಯಾಣ ಮಂಟಪದಲ್ಲಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ. ಮಾಗಡಿ ರಸ್ತೆ ಪೊಲೀಸ್ ಠಾಣೆ ಪೊಲೀಸರು ಇಬ್ಬರು ರೂಡಿಗತ ವ್ಯಕ್ತಿಗಳನ್ನು ವಶಕ್ಕೆ ಪಡೆದು ಅವರಿಂದ 15.40 ಲಕ್ಷ ಮೌಲ್ಯದ 91ಗ್ರಾಂ ಚಿನ್ನಾಭರಣ ಹಾಗೂ 150 ಗ್ರಾಂ ಬೆಳ್ಳಿಯ ವಸ್ತುಗಳನ್ನು ವಶಕ್ಕೆ ಪಡೆದಿರುತ್ತಾರೆ.
ಈ ಯಶಸ್ವಿ ಕಾರ್ಯಾಚರಣೆಯನ್ನು ಪಶ್ಚಿಮ ವಿಭಾಗದ ಉಪ ಪೊಲೀಸ್ ಆಯುಕ್ತರವರಾದ ಗಿರೀಶ್ ಎಸ್. ರವರ ಮಾರ್ಗದರ್ಶನದಲ್ಲಿ ಹಾಗೂ ವಿಜಯನಗರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರವರಾದ ಶ್ರೀ ಚಂದನ್ ಕುಮಾರ್ ರವರ ಮಾರ್ಗದರ್ಶನದಲ್ಲಿ ಮಾಗಡಿರಸ್ತೆ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಶ್ರೀ ರಾಜು. ಜಿ.ಪಿ. ರವರ ನೇತೃತ್ವದ ತಂಡ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿರುತ್ತಾರೆ.

Leave a Reply

Your email address will not be published. Required fields are marked *