ಬೆಂಗಳೂರು ನಗರದ ಸುದ್ದಗುಂಟೆ ಪಾಳ್ಯ ಪೊಲೀಸ್ , ಗುರಪ್ಪನಪಾಳ್ಯ, 1ನೇ ಹಂತ, ಬಿ.ಟಿ.ಎಂ ಲೇಔಟ್ ನ ಮನೆಯೊಂದರಲ್ಲಿ ಕೇಂದ್ರ ಸರ್ಕಾರದಿಂದ ನಿಷೇಧಿಸಲಾಗಿರುವ ಎಲೆಕ್ಟ್ರಾನಿಕ್ ಸಿಗರೇಟ್‌ಗಳನ್ನು (ಇ-ಸಿಗರೇಟ್) ಕೇರಳ ಮೂಲದ ವ್ಯಕ್ತಿಯೊಬ್ಬ ವಿದೇಶದಿಂದ ಅಕ್ರಮವಾಗಿ ಆಮದು ಮಾಡಿಕೊಂಡು ತನ್ನ ಮನೆಯಲ್ಲಿ ಸಂಗ್ರಹಿಸಿ ಮಾರಾಟ ಮಾಡುತ್ತಿದ್ದನು. ಈ ಕುರಿತು ಮಾಹಿತಿ ಸಂಗ್ರಹಿಸಿದ ಬೆಂಗಳೂರು ನಗರ ಸಿಸಿಬಿ ಘಟಕದ ಮಾದಕದ್ರವ್ಯ ನಿಗ್ರಹ ದಳದ ಅಧಿಕಾರಿಗಳು ದಾಳಿ ಮಾಡಿ, ಕೇರಳ ಮೂಲದ ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆದಂ ಡ ಆತನ ಮನೆಯಲ್ಲಿದ್ದ 3 ಕೋಟಿ ಮೌಲ್ಯದ ಇ-ಸಿಗರೇಟ್‌ಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.
ಮರಣದಲ್ಲಿ ಕಲೆ ಮರೆ ೧೦ಡಿರುವ ಇತರೆ ವ್ಯಕ್ತಿಗಳು ದುಬೈ ದೇಶದಿಂದ ಎಲೆಕ್ಟ್ರಾನಿಕ್ ಸಿಗರೇಟ್‌ಗಳನ್ನು (ಇ- ಸಿಗರೇಟ್) ಕೊರಿಯರ್ ಎಜೆನ್ಸಿಯ ಮೂಲಕ ಬೆಂಗಳೂರು ನಗರಕ್ಕೆ ತರಿಸಿಕೊಂಡು ಮಾರಾಟ ಮಾಡಿ, ಅಕ್ರಮವಾಗಿ ಹಣ ಸಂಪಾದನೆಯಲ್ಲಿ ತೊಡಗಿಕೊಂಡಿದ್ದರೆಂಬ ಮಾಹಿತಿಯು ತನಿಖೆಯಿಂದ ತಿಳಿದುಬಂದಿರುತ್ತದೆ. ವಿರುದ್ಧ ಸುದ್ದಗುಂಟೆ ಪಾಳ್ಯ ಪೊಲೀಸ್ ಠಾಣೆಯಲ್ಲಿ ಪೂರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ.
ಸದರಿ ಕಾರ್ಯಾಚರಣೆಯನ್ನು ಅಪರ ಪೊಲೀಸ್ ಆಂತರು (ಅಪರಾಧ) ರವರಾದ ಡಾ| ಚಂದ್ರಗುಪ್ತ ಐಪಿಎಸ್ ಮತ್ತು ಉಪ ಪೊಲೀಸ್ ಆಯುಕ್ತರು, (ಅಪರಾಧ- 2) ರವರಾದ ಶ್ರೀ. ಶ್ರೀನಿವಾಸ್ ಗೌಡ, ಐಪಿಎಸ್ ರವರ ಮಾರ್ಗದರ್ಶನದಲ್ಲಿ ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳದ ಸಹಾಯಕ ಪೊಲೀಸ್ ಆಯುಕ್ತರವರ ನೇತೃತ್ವದಲ್ಲಿ ಅಧಿಕಾರಿ ಮತ್ತು ಸಿಬ್ಬಂದಿಯವರ ತಂಡವು ಈ ಕಾರ್ಯಾಚರಣೆಯನ್ನು ಯಶಸ್ವಿಗೊಳಿಸಿರುತ್ತಾರೆ.