ಗಡಿಪಾರು ಆದೇಶವನ್ನು ಉಲ್ಲಂಘಿಸಿ ಅಕ್ರಮವಾಗಿ ನೆಲೆಸಿದ್ದ ಓರ್ವ ರೌಡಿಶೀಟರ್‌ನ ವರ

ಡಿ.ದ.ಹಳ್ಳಿ ಪೊಲೀಸ್ ಠಾಣೆಯ ರೌಡಿಶೀಟರ್ ಒಬ್ಬನನ್ನು ಉಪ ಪೊಲೀಸ್ ಆಯುಕ್ತರು ಪೂರ್ವ ವಿಭಾಗ ರವರು ದಿನಾಂಕ 24/04/2023 ರಿಂದ ಒಂದು ವರ್ಷದ ಅವಧಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದರು. ಈ ಅದೇಶವನ್ನು ಉಲ್ಲಂಘಿಸಿ ಬೆಂಗಳೂರು ನಗರದ ಡಿ.ಜಿ.ಹಳ್ಳಿ ಪೊಲೀಸ್ ಠಾಣಾ ಸರಹದ್ದಿನಲ್ಲಿ ಕಾನೂನುಬಾಹಿರವಾಗಿ ನೆಲೆಸಿದ್ದ ರೌಡಿಶೀಟರ್ ನನ್ನು ಸಿ.ಸಿ.ಬಿಯ ಸಂಘಟಿತ ಅಪರಾಧ ದಳ (ಪೂರ್ವ) ದ ಅಧಿಕಾರಿಗಳು ಪತ್ತೆಹಚ್ಚಿ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿರುತ್ತಾರೆ.
ವಶಕ್ಕೆ ಪಡೆದ ರೌಡಿಶೀಟರ್ನ ವಿರುದ್ಧ 2 4 2 ಕೊಲೆಯತ್ನ ಮತ್ತು 4 ಇತರೆ ಪ್ರಕರಣಗಳು ದಾಖಲಾಗಿರುತ್ತವೆ. ಈತನು ತನ್ನ ಎದುರಾಳಿ ಗ್ಯಾಂಗ್ ನ ಮೇಲಿನ ದ್ವೇಷದಿಂದ ಕೊಲೆ, ಕೊಲೆಯತ್ನ, ಹಲ್ಲೆ ಹಾಗೂ
ಗುಲಮಗಲ ಭಯಂತಹ ಕೃತ್ಯಗಳಲ್ಲಿ ತೊಡಗಿಕೊಂಡು ಸಾರ್ವಜನಿಕರ ಶಾಂತಿ ನೆಮ್ಮದಿಗೆ ಭಂಗ ತರುವ ಸಾಧ್ಯತೆ ಇದ್ದುದರಿಂದ ಉಪ ಪೊಲೀಸ್ ಆಯುಕ್ತರು ಪೂರ್ವ ವಿಭಾಗ ರವರು ದಿನಾಂಕ, 24/04/2013 ರಿಂದ ಒಂದು ವರ್ಷದ ಅವಧಿಗೆ ಗಡಿಪಾರು ಮಾಡಿ ಆದೇಶ ಹೊರಿಡಿಸಿದ್ದರು.
ಸಿ.ಸಿ.ಬಿಯ ಸಂಘಟಿತ ಅಪರಾಧ ದಳ (ಪೂರ್ವ) ದ ಅಧಿಕಾರಿ ಮತ್ತು ಸಿಬ್ಬಂದಿಗಳು ಈ ತಲೆ ಮರೆಸಿಕೊಂಡಿದ್ದ ರೌಡಿಶೀಟರ್‌ನನ್ನು ಪತ್ತೆಹಚ್ಚಿ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿರುತ್ತಾರೆ.

Leave a Reply

Your email address will not be published. Required fields are marked *