ಚಿನ್ನದ ಸರವನ್ನು ಸುಲಿಗೆ ಮಾಡಿ ಪರಾರಿಯಾಗಿದ್ದ ಓರ್ವನ ವಶ. ಆತನಿಂದ ಈ 1 ಲಕ್ಷ ಬೆಲೆ ಬಾಳುವ ಚಿನ್ನದ ಸರ ವಶ.

ಬೆಂಗಳೂರು ನಗರದ ಕೆ.ಆರ್. ಪುರ ಪೊಲೀಸ್ ಠಾಣಾ ಸರಹದ್ದಿನಲ್ಲಿ ದಿನಾಂಕ: 11.01.2024 ರಂದು ಬೆಳಗಿನ ಜಾವ ಸುಮಾರು 03-00 ಗಂಟೆಯ ಸಮಯದಲ್ಲಿ ಮೂರು ವ್ಯಕ್ತಿಗಳು, ಓರ್ವ ಬೈಕ್ ಸವಾರನನ್ನು ಅಡ್ಡಗಟ್ಟಿ ಹೆದರಿಸಿ, ಆತನ ಕತ್ತಿನಲ್ಲಿದ್ದ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿ ಯಾಗಿರುತ್ತಾರೆ. ಈ ಕುರಿತು ಕೆ.ಆರ್. ಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ತನಿಖೆ ಕೈಗೊಂಡ ಪೊಲೀಸರು ಭಾತ್ಮೀದಾರರಿಂದ ಮಾಹಿತಿ ಸಂಗ್ರಹಿಸಿ, ದಿನಾಂಕ:30-01-2024 ರಂದು ಓರ್ವನನ್ನು ವಶಕ್ಕೆ ಪಡೆದುಕೊಂಡಿರುತ್ತಾರೆ.
ತನಿಖೆ ಮುಂದುವರೆಸಿ, ವಶಕ್ಕೆ ಪಡೆದುಕೊಂಡ ವ್ಯಕ್ತಿಯಿಂದ 16 ಗ್ರಾಂ ತೂಕದ ಒಂದು ಲಕ್ಷ ಬೆಲೆ ಬಾಳುವ ಒಂದು ಚಿನ್ನದ ಸರವನ್ನು ವಶಪಡಿಸಿಕೊಂಡಿರುತ್ತಾರೆ. ಈ ಪ್ರಕರಣದಲ್ಲಿ ಮತ್ತಿಬ್ಬರು ವ್ಯಕ್ತಿಗಳು ತಲೆಮರೆಸಿಕೊಂಡಿರುತ್ತಾರೆ. ತನಿಖೆ ಮುಂದುವರೆದಿದೆ.
ಈ ಕಾರ್ಯಾಚರಣೆಯನ್ನು ವೈಟ್‌ ಫೀಲ್ಡ್ ವಿಭಾಗದ ಉಪ ಪೊಲೀಸ್‌ ಆಯುಕ್ತರಾದ ಶ್ರೀ ಶಿವಕುಮಾ‌ ಐ.ಪಿ.ಎಸ್ ರವರ ಮಾರ್ಗದರ್ಶನದಲ್ಲಿ, ಶ್ರೀಮತಿ ಪ್ರಿಯದರ್ಶಿನಿ ಈಶ್ವರ್ ಸಾಣೇಕೊಪ್ಪ ಸಹಾಯಕ ಪೊಲೀಸ್ ಆಯುಕ್ತರು, ವೈಟ್‌ಫೀಲ್ಡ್ ಉಪ ವಿಭಾಗರವರ ನೇತೃತ್ವದಲ್ಲಿ, ಕೆಆರ್ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಶ್ರೀ ಮಂಜುನಾಥ್ ಹಾಗೂ ಇತರೆ ಅಧಿಕಾರಿ/ಸಿಬ್ಬಂದಿಗಳು ಪ್ರಕರಣವನ್ನು ಬೇದಿಸುವಲ್ಲಿ ಯಶಸ್ವಿಯಾಗಿರುತ್ತಾರೆ.

Leave a Reply

Your email address will not be published. Required fields are marked *