ಅಪ್ರಾಪ್ತ ಬಾಲಕಿಯೊಂದಿಗೆ ಅತ್ಯಾಚಾರಕ್ಕೆ ಯತ್ನಿಸಿದ್ದ ವ್ಯಕ್ತಿಗೆ ಮಾನ್ಯ ನ್ಯಾಯಾಲಯವು 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 11,00,000/- ದಂಡ ವಿಧಿಸಿದೆ.

ನಂದಿನಿಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಲಕ್ಷ್ಮೀದೇವಿನಗರದಲ್ಲಿರುವ ವೆಲ್ಡಿಂಗ್ ಶಾಪ್‌ನಲ್ಲಿ ಕೆಲಸ ಮಾಡಿಕೊಂಡಿದ್ದ ಓರ್ವ ವ್ಯಕ್ತಿ ದಿನಾಂಕ 09-05-2022 ರಂದು ಮಧ್ಯಾಹ್ನ 3-00 ಗಂಟೆ ಸುಮಾರಿನಲ್ಲಿ 07 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಅಸಭ್ಯವಾಗಿ ವರ್ತಿಸಿದ್ದು, ಈ ಸಂಬಂಧ ನಂದಿನಿಲೇಔಟ್ ಪೊಲೀಸ್ ಠಾಣೆಯಲ್ಲಿ ಪೋಕೋ ಕಾಯ್ದೆಯಡಿ ಪ್ರಕರಣ ದಾಖಲಾಗಿರುತ್ತದೆ.
ಈ ಪ್ರಕರಣದಲ್ಲಿ ಈ ಹಿಂದೆ ಇದ್ದ ನಂದಿನಿಲೇಔಟ್ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಶ್ರೀ ವೆಂಕಟೇಗೌಡ ರವರು ತನಿಖೆಯನ್ನು ಕೈಗೊಂಡು ಆರೋಪಿಯನ್ನು ದಸ್ತಗಿರಿ ಮಾಡಿ, ಸೂಕ್ತ ಸಾಕ್ಷಾಧಾರಗಳನ್ನು ಸಂಗ್ರಹಿಸಿ, ನಿಗಧಿತ ಸಮಯದಲ್ಲಿ ತನಿಖೆಯನ್ನು ಪೂರ್ಣಗೊಳಿಸಿ, ಆರೋಪಿಯ ವಿರುದ್ಧ ಮಾನ್ಯ Iನೇ ತ್ವರಿತಗತಿ ವಿಶೇಷ ನ್ಯಾಯಾಲಯಕ್ಕೆ ದೋಷರೋಪಪಟ್ಟಿ ಸಲ್ಲಿಸಿರುತ್ತಾರೆ. ಈ ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕರಾಗಿ ಶ್ರೀಮತಿ ಕೃಷ್ಣವೇಣಿ ರವರು ಅಭಿಯೋಗದ ಪರವಾಗಿ ವಾದ ಮಂಡಿಸಿರುತ್ತಾರೆ. ಸದರಿಯವರ ವಾದವನ್ನು ಆಲಿಸಿದ ಮಾನ್ಯ ನ್ಯಾಯಾಲಯವು ವಿಚಾರಣೆ ನಡೆಸಿ, ದಿನಾಂಕ 06-02-2024 ರಂದು ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು ₹ 1,00,000/- ದಂಡ ವಿಧಿಸಿ ಆದೇಶಿಸಿರುತ್ತಾರೆ.


Leave a Reply

Your email address will not be published. Required fields are marked *