ದಿನಾಂಕ: 09-02-2024 ರಂದು ಪಿರ್ಯಾದುದಾರರು ಕಾಡುಗೋಡಿ ಪೊಲೀಸ್ ಠಾಣೆಗೆ
ಹಾಜರಾಗಿ ನೀಡಿದ ದೂರಿನಲ್ಲಿ, ಪಿರ್ಯಾದುದಾರರ ಮನೆಯ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನವನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುತ್ತಾರೆಂದು ನೀಡಿದ ದೂರಿನ ಮೇರೆಗೆ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ದಾಖಲಾಗಿರುತ್ತದೆ.
ತನಿಖೆಯನ್ನು ಕೈಗೊಂಡ ಕಾಡುಗೋಡಿ ಪೊಲೀಸರು ಕ್ಷೀಪ್ತ ಕಾರ್ಯಾಚರಣೆ ನಡೆಸಿ, ಅದೇ ದಿನ
9-02-2024 ರಂದೇ ದ್ವಿಚಕ್ರ ವಾಹನ ಸಮೇತ ಒಬ್ಬ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡಿರುತ್ತಾರೆ. ಆತನನ್ನು ಸುಧೀರ್ಘವಾಗಿ ವಿಚಾರಣೆ ನಡೆಸಿ ಕಾಡುಗೋಡಿ ಪೊಲೀಸ್ ಠಾಣೆಗೆ ಸಂಬಂಧಿಸಿದಂತೆ 06 ದ್ವಿಚಕ್ರ ವಾಹನಗಳ ಕಳವು ಪ್ರಕರಣಗಳು ಪತ್ತೆಯಾಗಿರುತ್ತವೆ. ಅಲ್ಲದೆ ವೈಟ್ ಫೀಲ್ಡ್ ಪೊಲೀಸ್ ಠಾಣೆಯ 01 ದ್ವಿಚಕ್ರ ವಾಹನ ಕಳವು ಪ್ರಕರಣ ಮತ್ತು ಸರ್ಜಾಪುರ ಪೊಲೀಸ್ ಠಾಣೆಯ 01 ದ್ವಿಚಕ್ರವಾಹನ ಕಳವು ಪ್ರಕರಣಗಳು ಪತ್ತೆಯಾಗಿರುತ್ತವೆ. ಈತನಿಂದ ಒಟ್ಟು 19 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ತನಿಖೆ ಮುಂದುವರೆದಿದೆ.
ಈ ಕಾರ್ಯಾಚರಣೆಯನ್ನು ವೈಟ್ ಫೀಲ್ಡ್ ಉಪ ಪೊಲೀಸ್ ಆಯುಕ್ತರಾದ ಶಿವಕುಮಾರ್ ಗುಣಾರೆ, ಐ.ಪಿ.ಎಸ್. ರವರ ಮಾರ್ಗದರ್ಶನದಲ್ಲಿ ಶ್ರೀಮತಿ ಪ್ರಿಯದರ್ಶಿನಿ ಈಶ್ವರ್ ಸಾಣೆಕೊಪ್ಪ ರವರ ನೇತೃತ್ವದಲ್ಲಿ ಕಾಡುಗೋಡಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಹಾಗೂ ಅಧಿಕಾರಿ ಸಿಬ್ಬಂದಿಯವರು ಈ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.