ಬೆಂಗಳೂರು ನಗರದ ಮಹದೇವಪುರ ಪೊಲೀಸ್ ಠಾಣಾ ಸರಹದ್ದಿನಲ್ಲಿ ಪಿರ್ಯಾದುದಾರರು ನಡೆದುಕೊಂಡು ಹೋಗುತ್ತಿರುವಾಗ ಯಾರೋ ಅಪರಿಚಿತರು ಹಿಂದಿನಿಂದ ಬೈಕ್‌ನಲ್ಲಿ ಬಂದು ಪಿರ್ಯಾದುದಾರರ ಕೈಯಲಿದ್ದ, ಮೊಬೈಲ್ ಫೋನ್ ಅನ್ನು ಕಿತ್ತುಕೊಂಡು ಹೋಗಿರುತ್ತಾರೆಂದು ದೂರನ್ನು ನೀಡಿರುತ್ತಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡು ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆದುಕೊಂಡಿರುತ್ತಾರೆ. ಈ ಇಬ್ಬರು ವ್ಯಕ್ತಿಗಳು ಸೇರಿಕೊಂಡು ಮೊಬೈಲ್ ರಾಬರಿ ಮಾಡುತ್ತಿರುವುದಾಗಿ ತಿಳಿಸಿರುತ್ತಾರೆ. ಇವರಿಂದ ಒಟ್ಟು 20.00.000/- (ಇಪ್ಪತ್ತು ಲಕ್ಷ ರೂಪಾಯಿ) ಬೆಲೆ ಬಾಳುವ ಒಟ್ಟು 68 ವಿವಿಧ ಕಂಪನಿಯ ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಮೊಬೈಲ್ ಫೋನ್‌ಗಳಲ್ಲಿ ಮಹದೇವಪುರ ಪೊಲೀಸ್ ಠಾಣೆಯ ಒಟ್ಟು 9 ಮೊಬೈಲ್ ರಾಬರಿ ಪ್ರಕರಣಗಳು ಪತ್ತೆಯಾಗಿದ್ದು ಹೆಚ್ಚಿನ ತನಿಖೆ ಕೈಕೊಳ್ಳಲಾಗಿದೆ.
ಈ ವ್ಯಕ್ತಿಗಳು ಬೆಂಗಳೂರು ನಗರದ ಜನನಿಬಿಡ ಪ್ರದೇಶಗಳಾದ ಟಿನ್‌ಪ್ಯಾಕ್ಟರಿ, ಮಾರತ್ತಹಳ್ಳಿ, ಹೆಬ್ಬಾಳ. ಸಿಲ್ಕ್ ಬೋರ್ಡ್ ಮುಂತಾದ ಸ್ಥಳಗಳಲ್ಲಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿರುವ ಒಂಟಿ ವ್ಯಕ್ತಿಗಳನ್ನು ಗುರಿಯಾಗಿಟ್ಟುಕೊಂಡು ಅವರುಗಳಿಂದ ಮೊಬೈಲ್ ಕಿತ್ತುಕೊಂಡು ಅವುಗಳನ್ನು ತಮ್ಮ ಸ್ವಂತ ಊರು ಹಿರಿಯೂರಿನಲ್ಲಿ ಮಾರಾಟ ಮಾಡಿ ಬಂದ ಹಣದಿಂದ ಅವರುಗಳ ದುಶ್ಚಟಗಳಿಗೆ ಬಳಸಿಕೊಳ್ಳುತಿರುತ್ತಾರೆ.
ಈ ಕಾರ್ಯಚರಣೆಯನ್ನು ವೈಟ್ ಫೀಲ್ಡ್ ವಿಭಾಗದ. ಉಪ ಪೊಲೀಸ್ ಆಯುಕ್ತರಾದ
ಡಾ|ಶಿವಕುಮಾರ್, ಐ.ಪಿ.ಎಸ್. ರವರ ಮಾರ್ಗದರ್ಶನದಲ್ಲಿ. ಶ್ರೀಮತಿ ರೀನಾ ಸುವರ್ಣ ಸಹಾಯಕ
ಪೊಲೀಸ್ ಆಯುಕ್ತರು, ವೈಟ್ ಫಿಲ್ಡ್ ಉಪ-ವಿಭಾಗ, ರವರ ನೇತೃತ್ವದಲ್ಲಿ, ಕೆ.ಆರ್.ಪುರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಹಾಗೂ ಸಿಬ್ಬಂದಿಯವರು ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಗೊಳಿಸಿರುತ್ತಾರೆ.