ದಿನಾಂಕ:03.03.2024 ರಂದು, ಪೊಲೀಸ್ ಆಯುಕ್ತರ ಕಛೇರಿಯಲ್ಲಿ, ಮಾನ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ ರವರು, ರಾಜ್ಯದ ಪೊಲೀಸ್ ಮಹಾ ನಿರ್ದೇಶಕರು, ಕರ್ನಾಟಕ ರಾಜ್ಯ, ಬೆಂಗಳೂರು, ಪೊಲೀಸ್ ಆಯುಕ್ತರು, ಬೆಂಗಳೂರು ನಗರ. ಎಡಿಜಿಪಿ ಕಾನೂನು ಸುವ್ಯವಸ್ಥೆ, ಗುಪ್ತವಾರ್ತೆಯ ನಿರ್ದೇಶಕರು ಹಾಗೂ ಬೆಂಗಳೂರು ನಗರದ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ರಾಜ್ಯದಲ್ಲಿ ಸಂಭವಿಸಿದ ಇತ್ತೀಚಿನ ಘಟನೆಗಳು, ಕಾನೂನು ಸುವ್ಯವಸ್ಥೆ ನಿರ್ವಹಣೆ ಸಂಬಂಧ ಸಮಾಲೋಚಿಸಿ, ಅಗತ್ಯ ಸಲಹಾ-ಸೂಚನೆಗಳನ್ನು ನೀಡಿರುತ್ತಾರೆ.