ಗಂಗಮ್ಮಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಿನಾಂಕ 13-05-2015 ರಂದು ಪಿರಾದಿಯು
ಕೆಲಸಕ್ಕೆ ಹೋಗಿದ್ದಾಗ, ಪಿರಾದಿಗೆ ಪರಿಚಯಸ್ಥ ವ್ಯಕ್ತಿಯೊಬ್ಬ ಮನೆಗೆ ಬಂದು, ಪಿರಾದಿಯ 07 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದು, ಈ ಸಂಬಂಧ ಗಂಗಮ್ಮಗುಡಿ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಮತ್ತು ಪೋಕಾಯ್ದೆಯಡಿ ಪ್ರಕರಣ ದಾಖಲಾಗಿರುತ್ತದೆ.
ಈ ಪ್ರಕರಣದಲ್ಲಿ ಈ ಹಿಂದೆ ಗಂಗಮ್ಮಗುಡಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಆಗಿದ್ದ, ಶ್ರೀಮತಿ ಮೇರಿ ಶೈಲಜ (ಪ್ರಸ್ತುತ ಎಸಿಪಿ, ಯಶವಂತಪುರ ಉಪ ವಿಭಾಗ) ರವರು ತನಿಖೆಯನ್ನು ಕೈಗೊಂಡು ಆರೋಪಿಯನ್ನು ದಸ್ತಗಿರಿ ಮಾಡಿ, ಸೂಕ್ತ ಸಾಕ್ಷಾಧಾರಗಳನ್ನು ಸಂಗ್ರಹಿಸಿ, ನಿಗಧಿತ ಸಮಯದಲ್ಲಿ ತನಿಖೆಯನ್ನು ಪೂರ್ಣಗೊಳಿಸಿ, ಆರೋಪಿಯ ವಿರುದ್ಧ ಮಾನ್ಯ 2ನೇ ತ್ವರಿತಗತಿ ವಿಶೇಷ ನ್ಯಾಯಾಲಯಕ್ಕೆ ದೋಷರೋಪಪಟ್ಟಿ ಸಲ್ಲಿಸಿರುತ್ತಾರೆ. ನ್ಯಾಯಾಲಯದ ವಿಚಾರಣೆ ಕಾಲದಲ್ಲಿ ಎಲ್ಲಾ ಸಾಕ್ಷಿದಾರರು ಸರಿಯಾದ ರೀತಿಯಲ್ಲಿ ಸಾಕ್ಷ್ಯವನ್ನು ನುಡಿದಿದ್ದ ಪ್ರಯುಕ್ತ ಮಾನ್ಯ ಘನ ನ್ಯಾಯಾಲಯವು ಆರೋಪಿಗೆ ಈ ಅಪರಾಧಕ್ಕೆ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 10,000/- ದಂಡ ವಿಧಿಸಿ ತೀರ್ಪು ನೀಡಿರುತ್ತದೆ.
ಈ ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕರಾಗಿ ಶ್ರೀಮತಿ ಎ.ವಿ. ಮಧು ರವರು ಅಭಿಯೋಗದ ಪರವಾಗಿ ಸಮರ್ಥವಾಗಿ ವಾದ ಮಂಡಿಸಿರುತ್ತಾರೆ. ಸಂತ್ರಸ್ಥ ಬಾಲಕಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ 4 ಲಕ್ಷ ಪರಿಹಾರ ಧನ ನೀಡಲು ನ್ಯಾಯಾಲಯವು ಆದೇಶಿಸಿರುತ್ತದೆ.