ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡವು ಅನಧಿಕೃತವಾಗಿ ವಾಸವಾಗಿರುವ ವಿದೇಶಿ ಪ್ರಜೆಗಳ ವಿರುದ್ಧ ಕಾರ್ಯಾಚರಣೆಯನ್ನು ನಡೆಸಿರುತ್ತಾರೆ. ಬಾಣಸವಾಡಿ ಪೊಲೀಸ್ ಠಾಣಾ ಸರಹದ್ದಿನಲ್ಲಿ ಅಧಿಕೃತ ದಾಖಲಾತಿಗಳಿಲ್ಲದೇ ವಾಸವಾಗಿದ್ದ ಓರ್ವ ವಿದೇಶಿ ಪ್ರಜೆಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ಮಾಡಲಾಗಿ ಈತನು 2015 ರಲ್ಲಿ ಟೂರಿಸ್ಟ್ ವೀಸಾ ಪಡೆದು ಭಾರತಕ್ಕೆ ಬಂದಿದ್ದು, ಮುಂಬೈ ಮುಖಾಂತರ ಬೆಂಗಳೂರಿಗೆ ಬಂದಿರುತ್ತಾನೆ.
2019 ರಲ್ಲಿ ಈತನ ಪಾಸ್‌ಪೋರ್ಟ್ ಅವಧಿ ಮುಕ್ತಾಯವಾಗಿದ್ದು, ಅಂದಿನಿಂದ ಬೆಂಗಳೂರಿನಲ್ಲಿ ಅನಧಿಕೃತವಾಗಿ ವಾಸವಾಗಿದ್ದನು. ಈತನನ್ನು ಎಫ್.ಆರ್.ಆರ್.ಓ ರವರ ಮುಂದೆ ಹಾಜರುಪಡಿಸಿ ಮುಂದಿನ ಕ್ರಮಕ್ಕಾಗಿ ಸೊಂಡೆಕೊಪ್ಪದಲ್ಲಿರುವ ಫಾರಿನ ರಿಸ್ಟಿಕ್ಷನ್ ಸೆಂಟರ್ (ಎಫ್.ಆರ್.ಸಿ) ಯಲ್ಲಿ ಇರಿಸಲಾಗಿದೆ.
ಈ ಕಾರ್ಯಾಚರಣೆಯನ್ನು ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡವು ಯಶಸ್ವಿಯಾಗಿ ಕೈಗೊಂಡಿರುತ್ತಾರೆ.